ಟಿಡಿಪಿಗೆ ಸಮಸ್ಯೆ ಪರಿಹಾರವಲ್ಲ, ವಿವಾದ ಬೇಕಿತ್ತು: ಕೇಂದ್ರ ಸಚಿವ ಅರುಣ್ ಜೇಟ್ಲಿ ಕಿಡಿ
ಎನ್ ಡಿಎ ಮೈತ್ರಿಕೂಟದಿಂದ ಟಿಡಿಪಿ ಪಕ್ಷ ಹೊರಬಂದ ಬೆನ್ನಲ್ಲೇ ಆ ಪಕ್ಷದ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದು, ಆ ಪಕ್ಷಕ್ಕೆ ಸಮಸ್ಯೆ ಪರಿಹಾರವಲ್ಲ, ವಿವಾದ ಬೇಕಿತ್ತು ಎಂದು ಕಿಡಿಕಾರಿದ್ದಾರೆ.

Published On :
ನವದೆಹಲಿ: ಎನ್ ಡಿಎ ಮೈತ್ರಿಕೂಟದಿಂದ ಟಿಡಿಪಿ ಪಕ್ಷ ಹೊರಬಂದ ಬೆನ್ನಲ್ಲೇ ಆ ಪಕ್ಷದ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದು, ಆ ಪಕ್ಷಕ್ಕೆ ಸಮಸ್ಯೆ ಪರಿಹಾರವಲ್ಲ, ವಿವಾದ ಬೇಕಿತ್ತು ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲಿ, ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಈಗಲೂ ಬದ್ಧವಾಗಿದೆ. ಆದರೆ ಟಿಡಿಪಿ ನಾಯಕರಿಗೆ ಸಮಸ್ಯೆಗೆ ಪರಿಹಾರ ಬೇಕಿರಲಿಲ್ಲ. ವಿವಾದ ಬೇಕಿತ್ತು ಎಂದು ಕಿಡಿಕಾರಿದ್ದಾರೆ.
2016ರ ಸೆಪ್ಟೆಂಬರ್ ನಲ್ಲೇ ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಿಕೆಗೆ ಸಿದ್ಧವಾಗಿತ್ತು. ಆದರೆ ಕಳೆದ ವರ್ಷ ಜನವರಿಯಲ್ಲಿ ಆಂಧ್ರ ಪ್ರದೇಶ ಅದನ್ನು ಸ್ವೀಕರಿಸುವ ತಾಂತ್ರಿಕ ಮಾರ್ಗ ಬದಲಾಯಿಸಲು ನಿ್ಧರಿಸಿತ್ತು. ಹೀಗಾಗಿ ಆರ್ಥಿಕ ಪ್ಯಾಕೇಜ್ ರವಾನೆ ಸ್ಥಗಿತವಾಯಿತು. ಆಂಧ್ರ ಪ್ರದೇಶ ರಾಜ್ಯದ ಸಮಸ್ಯೆಗೆ ಕೇಂದ್ರ ಸರ್ಕಾರ ಅಂದೇ ಪರಿಹಾರ ಸೂಚಿಸಿತ್ತು. ಆದರ ಚಂದ್ರಬಾಬು ನಾಯ್ಡು ಸರ್ಕಾರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ವಿವಾದ ಮಾಡುವುದರಲ್ಲೇ ತಲ್ಲೀನವಾಗಿತ್ತು.
ಆದರೆ ಈಗಲೂ ಕೇಂದ್ರ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ರಾಜ್ಯದ ಸರಿಸಮಾನ ಆರ್ಥಿಕ ಪ್ಯಾಕೇಜ್ ನೀಡಲು ಸಿದ್ಧ. ಇದರಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದು. ಆಂಧ್ರ ಪ್ರದೇಶ ಸರ್ಕಾರ ಕೇಳುತ್ತಿರುವಂತೆ ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲಾಗದು. ಇದಕ್ಕೆ ಸಾಂವಿಧಾನಿಕ ಅಡೆತಡೆಗಳಿದ್ದು, ಅವೈಜ್ಞಾನಿಕವಾಗಿ ನಿರ್ಧಾರಗಳನ್ನು ತೆಗೆದುಕೊಂಡರೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಹೊಡೆತ ಬೀಳುತ್ತದೆ. ಇದೇ ಕಾರಣಕ್ಕೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಬದಲಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ಈಗಲೂ ನಾವು ಆಂಧ್ರ ಪ್ರದೇಶ ಸರ್ಕಾರದ ಒಪ್ಪಿಗೆಗೆ ಕಾಯುತ್ತಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


