ಪಶ್ಚಿಮ ಬಂಗಾಳದಲ್ಲಿ ನೆಹರೂ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳು
ಲೆನಿನ್, ಪೆರಿಯಾರ್, ಅಂಬೇಡ್ಕರ್ ನಂತರ ಈಗ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ....

Published On :
ಬರ್ದ್ವಾನ್: ಲೆನಿನ್, ಪೆರಿಯಾರ್, ಅಂಬೇಡ್ಕರ್ ನಂತರ ಈಗ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರತಿಮೆಗೆ ದುಷ್ಕರ್ಮಿಗಳು ಕಪ್ಪು ಬಣ್ಣ ಎರಚಿ ಅವಮಾನ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಕಟ್ವಾ ಪಟ್ಟಣದಲ್ಲಿರುವ ಮಾಜಿ ಪ್ರಧಾನಿ ನೆಹರೂ ಅವರ ಪ್ರತಿಮೆಗೆ ಶನಿವಾರ ಕಿಡಿಗೇಡಿಗಳು ಕಪ್ಪು ಇಂಕ್ ಎರಚಿ ವಿರೂಪಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.
ಕಟ್ವಾದ ಟೆಲೆಫೋನ್ ಮೈದಾನದಲ್ಲಿರುವ ನೆಹರೂ ಪ್ರತಿಮೆಗೆ ಕಪ್ಪು ಬಣ್ಣ ಎರಚಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಘಟನೆಯ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


