ಮೇವು ಹಗರಣ: ಲಾಲು, ಜಗನ್ನಾಥ್ ಮಿಶ್ರಾ ವಿರುದ್ಧದ ತೀರ್ಪು ಮಾ. 19ಕ್ಕೆ ಮುಂದೂಡಿಕೆ
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್...

Published On :
ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಮತ್ತು ಜಗನ್ನಾಥ್ ಮಿಶ್ರಾ ಅವರ ವಿರುದ್ಧದ ನಾಲ್ಕನೇ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ಕೋರ್ಟ್ ಶನಿವಾರ ಮತ್ತೆ ಮುಂದೂಡಿದೆ.
ಸಿಬಿಐ ವಿಶೇಷ ಕೋರ್ಟ್ ಲಾಲು ಹಾಗೂ ಜಗನ್ನಾಥ್ ಮಿಶ್ರಾ ವಿರುದ್ಧದ ನಾಲ್ಕನೇ ಪ್ರಕರಣದ ತೀರ್ಪನ್ನು ಇಂದು ಪ್ರಕಟಿಸಬೇಕಾಗಿತ್ತು. ಆದರೆ ತೀರ್ಪನ್ನು ಮಾರ್ಚ್ 19ಕ್ಕೆ ಮುಂದೂಡಲಾಗಿದೆ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಕೀಲ ಪ್ರಭಾತ್ ಕುಮಾರ್ ಅವರು ತಿಳಿಸಿದ್ದಾರೆ.
ನಿನ್ನೆ ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಲಾಲು ಮತ್ತು ಜಗನ್ಮಾಥ್ ಮಿಶ್ರಾ ಅವರು ದುಮ್ಕಾ ಖಜಾನೆಯಿಂದ 3.13 ಕೋಟಿ ರುಪಾಯಿ ಡ್ರಾ ಮಾಡಿದ ಪ್ರಕರಣ ತೀರ್ಪನ್ನು ಇಂದಿಗೆ ಮುಂದೂಡಿದ್ದರು. ಇಂದು ಎರಡನೇ ಬಾರಿ ಮತ್ತೆ ಮುಂದೂಡಿದ್ದಾರೆ.
1990 ರಲ್ಲಿ ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಮೇವು ಹಗರಣಗಳಿಗೆ ಸಂಬಂಧಿಸಿದಂತೆ ಲಾಲೂ ವಿರುದ್ಧ 6 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಮೂರು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ.
ಮೇವು ಹಗರಣದ ಮೊದಲ ಪ್ರಕರಣದಲ್ಲಿ ಲಾಲು ಅಪರಾಧಿ ಎಂದು ಸಾಬೀತಾಗಿ 2013 ರಲ್ಲಿ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ 2017 ರ ಡಿ. 23 ರಂದು ಮತ್ತೊಂದು ಪ್ರಕರಣದಲ್ಲಿ ಮೂರುವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಯಿತು. ಜನವರಿ 24 ರಂದು ಮೂರನೇ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆ ವಿಧಿಸಲಾಯಿತು. ಇದೀಗ ರಾಂಚಿ ಹಾಗೂ ಪಾಟ್ನಾದಲ್ಲಿ ತಲಾ ಒಂದೊಂದು ಪ್ರಕರಣದಲ್ಲಿ ಲಾಲೂ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಲಾಲೂ ಪ್ರಸಾದ್ ಯಾದವ್ ಬಿರ್ಸಾ ಮುಂಡಾ ಕೇಂದ್ರಿಯ ಕಾರಾಗೃಹದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Lalu Prasad YadavCBIಸಿಬಿಐspecial courtಲಾಲು ಪ್ರಸಾದ್ ಯಾದವ್ವಿಶೇಷ ನ್ಯಾಯಾಲಯFodder scamಮೇವು ಹಗರಣShiv Pal Singhಶಿವಪಾಲ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


