ಸಂಸ್ಥಾಪಕರ ಕಲ್ಪನೆಯಂತೆ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ರಾಜಕೀಯ ನಿರ್ಣಯ: ಖರ್ಗೆ
ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕಾರಕ್ಕಾಗಿ ಪ್ರಾಯೋಗಿಕ ವಿಧಾನ ಅಳವಡಿಸಿಕೊಳ್ಳಲು ಸಂಸ್ಥಾಪಕರ ಕಲ್ಪನೆಯಂತೆ ರಾಜಕೀಯ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ.

ನವದೆಹಲಿ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಸಾಮಾನ್ಯ ಕಾರ್ಯಕ್ರಮ ವಿಸ್ತರಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕಾರಕ್ಕಾಗಿ ಪ್ರಾಯೋಗಿಕ ವಿಧಾನ ಅಳವಡಿಸಿಕೊಳ್ಳಲು ಸಂಸ್ಥಾಪಕರ ಕಲ್ಪನೆಯಂತೆ ರಾಜಕೀಯ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಪ್ರಮುಖ ಪ್ರತಿಪಕ್ಷಗಳೊಂದಿಗೆ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿಗಾಗಿ ಪ್ರಯತ್ನಿಸುವ ರಾಜಕೀಯ ನಿರ್ಣಯವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿಂದು ನಡೆದ ಎಐಸಿಸಿಯ 84 ನೇ ಮಹಾ ಅಧಿವೇಶನದಲ್ಲಿ ಮಂಡಿಸಿದರು.
ಸಂವಿಧಾನಿಕ ಮೌಲ್ಯಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಸರ್ಕಾರಿ ಸಂಸ್ಥೆಗಳು ಒತ್ತಡಕ್ಕೊಳಗಾಗಿ ತಮ್ಮ ಸ್ವಾತಂತ್ರ್ಯದೊಂದಿಗೆ ರಾಜೀ ಮಾಡಿಕೊಂಡಿವೆ ಎಂದು ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ದಾಳಿ ನಡೆಸಿದರು.
ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಸಂವಿಧಾನದ ರಕ್ಷಣೆಗಾಗಿ ಯಾವ ತ್ಯಾಗಕ್ಕೂ ಸಿದ್ದರಿರಬೇಕಾದ ಅನೀವಾರ್ಯತೆ ಎದುರಾಗಿದೆ. ಗಣತಂತ್ರದ ಸಂಸ್ಥಾಪಕರ ಮೌಲ್ಯ ಆದರ್ಶಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು
ವೈವಿಧ್ಯಮಯ ಕಲೆ, ಧರ್ಮ, ಸಾಹಿತ್ಯ, ಸಂಸ್ಕೃತಿಯ ಜನರು ದೇಶದಲ್ಲಿ ವಾಸಿಸುತ್ತಿದ್ದು, ಕೋಮುವಾದಿಗಳು, ಪ್ರತ್ಯೇಕತವಾದಿಗಳಿಂದ ಅಪಾಯ ಎದುರಾದಂತಹ ಸಂದರ್ಭದಲ್ಲಿ ಜನತೆಯ ರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದರು
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರು, ಕಾರ್ಮಿಕರು, ಅಸಂಘಟಿತ ವಲಯದ ಕೆಲಸಗಾರರು, ಸ್ವ ಉದ್ಯೋಗಿಗಳು, ದಲಿತರು, ವ್ಯಾಪಾರಿಗಳು, ಅಲ್ಪಸಂಖ್ಯಾತರು, ಬಡವರು ದ್ರೋಹಕ್ಕೊಳಗಾಗಿದ್ದಾರೆ.ಇವಿಎಂಗಳನ್ನು ತಿರುಚಲಾಗಿದೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.
ನಾಗರಿಕರ ಮೂಲಭೂತ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


