ದೇಶ

ಮುಸ್ಲಿಮನಾಗಿದ್ದರೂ ನಾನು ರಾಮ ಭಕ್ತ: ಫಾರೂಕ್ ಅಬ್ದುಲ್ಲಾ

ಸಾಮಾನ್ಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಮುಸ್ಲಿಮನಾಗಿದ್ದರೂ ನಾನು ರಾಮಭಕ್ತ ಎಂದು ಹೇಳಿದ್ದಾರೆ.

ಮುಸ್ಲಿಮನಾಗಿದ್ದರೂ ನಾನು ರಾಮ ಭಕ್ತ: ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Published On :
ನವದೆಹಲಿ: ಸಾಮಾನ್ಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಮುಸ್ಲಿಮನಾಗಿದ್ದರೂ ನಾನು ರಾಮಭಕ್ತ ಎಂದು ಹೇಳಿದ್ದಾರೆ. 
ಜೀ ವಾಹಿನಿ ಆಯೋಜಿಸಿದ್ದ ಕಾನ್ಕ್ಲೇವ್ ನಲ್ಲಿ ಭಾಗವಹಿಸಿದ್ದ ವೇಳೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಹಾಗೂ ರಾಷ್ಟ್ರವಿರೋಧಿತ್ವ ಎರಡೂ ದೇಶಕ್ಕೆ ಮಾರಕ ಎಂದು ಹೇಳಿದ್ದು, ಆಂತರಿಕ ಅಪಾಯವೇ ಎಲ್ಲದಕ್ಕಿಂತ ದೊಡ್ಡ ಅಪಾಯ ಎಂದು ಹೇಳಿದ್ದಾರೆ. 
ನಮ್ಮ ದೇಶವನ್ನು ನಾವೇ ರಕ್ಷಿಸಿಕೊಳ್ಳಬೇಕು ಎಂದು ಹೇಳಿರುವ ಫಾರೂಕ್ ಅಬ್ದುಲ್ಲಾ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಆದರೂ ಪಾಕ್ ವಶದಲ್ಲಿರುವ ಕಾಶ್ಮೀರವನ್ನು ಭಾರತ ವಾಪಸ್ ಪಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ಇದೇ ವೇಳೆ ತಾನು ಮುಸ್ಲಿಮನಾಗಿದ್ದರೂ ರಾಮನನ್ನು ಇಷ್ಟಪಡುತ್ತೇನೆ, ನಾನೂ ರಾಮಭಕ್ತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.