ನ್ಯಾಯವಾದಿಗಳು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು: ರಾಮನಾಥ್ ಕೋವಿಂದ್
ನ್ಯಾಯವಾದಿಗಳು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು ಎಂದು ರಾಷ್ಟ್ರಪತಿ ರಾಮನಾಥ್ ...

ಕಟಕ್(ಒಡಿಶಾ): ನ್ಯಾಯವಾದಿಗಳು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.
ಕಟಕ್ ನಲ್ಲಿ ನ್ಯಾಷನಲ್ ಲಾ ಯೂನಿವರ್ಸಿಟಿಯ 3ನೇ ಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾನೂನು ಸೇವೆಯ ಅವಕಾಶ ವಿಸ್ತಾರವಾಗಿದ್ದು ಬಹು ವಿಧದ ಕ್ಷೇತ್ರಗಳಲ್ಲಿ ಇಂದು ಕೆಲಸ ಮಾಡಲಾಗುತ್ತದೆ ಮತ್ತು ಅಂತಾರಾಷ್ಟ್ರೀಯ ರಾಯಭಾರ ಸೇರಿದಂತೆ ವಾಣಿಜ್ಯ ಮತ್ತು ವ್ಯಾಪಾರ ಕ್ಷೇತ್ರಗಳಿಗೆ ಸಹ ವಕೀಲ ವೃತ್ತಿ ವಿಸ್ತರಣೆಯಾಗಿದೆ ಎಂದರು.
ಸಮಾಜದ ಕೆಳಸ್ತರದ ಮತ್ತು ಧ್ವನಿಯಿಲ್ಲದವರ ಏಳಿಗೆಗೆ ನ್ಯಾಯವಾದಿಗಳು ಸಹಕಾರ ನೀಡಬೇಕು. ಏಕೆಂದರೆ ಕೆಳಸ್ತರದವರಿಗೆ ಕಾನೂನು ವೆಚ್ಚ ಭರಿಸಲು ಸಾಧ್ಯವಾಗುವುದಿಲ್ಲ ಎಂದರು.
ಸಮಾರಂಭದಲ್ಲಿ ಮಾತನಾಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ದೇಶದ ಕೋಟ್ಯಂತರ ಜನರ ನ್ಯಾಯ ಮತ್ತು ಸಮಾನತೆಗೆ ಕಾನೂನು ವಿದ್ಯಾರ್ಥಿಗಳು ಕೆಲಸ ಮಾಡಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


