ಪತಂಜಲಿ ಉತ್ಪನ್ನಗಳ ಪರ ಪ್ರಚಾರ: ಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ವಿರುದ್ಧ ಪ್ರತಿಭಟನೆ
ಪತಂಜಲಿ ಉತ್ಪನ್ನಗಳ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ...

Published On :
ಮುಂಬಯಿ: ಪತಂಜಲಿ ಉತ್ಪನ್ನಗಳ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದರು.
ಸೋಲಾಪುರದಲ್ಲಿ ಏರ್ಪಡಿಸಿದ್ದ ಬಾಬಾ ರಾಮದೇವ್ ಅವರ ಆಯುರ್ವೇದ ಉತ್ಪನ್ನಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.
ಪತಂಜಲಿ ಉತ್ಪನ್ನಗಳಿಗೆ ಪ್ರಚಾರ ಮಾಡುವ ಅಮೃತಾ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೇಕೆ ನೀಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು ನಂತರ ರಿಲೀಸ್ ಮಾಡಿದರು.
ಪ್ರತಿಭಟನೆ ನಡೆಸುತ್ತಿದ್ದವರ ವಿರುದ್ಧ ಯಾವುದೇ ಕೇಸು ದಾಖಲಾಗಿಲ್ಲ, ಈ ಮೊದಲು ದೇವೇಂದ್ರ ಫಡ್ನವೀಸ್ ಭಾಷಣ ಮಾಡುವಾಗ, ಪತಂಜಲಿ ಉತ್ಪನ್ನಗಳನ್ನು ಕುರುಡಾಗಿ ನಂಬಿದ್ದಾರೆ, ಅದರಿಂದ ಬರುವ ಆದಾಯ ದೇಶಕ್ಕೆ ಸಹಾಯವಾಗುತ್ತದೆ ಎಂದು ಹೇಳಿದ್ದರು. ಕಾರ್ಯ ಕ್ರಮದಲ್ಲಿ ನಟಿ ಹೇಮಮಾಲಿನಿ ಕೂಡ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


