ನಾಲ್ಕು ವರ್ಷಗಳ ತಾಳ್ಮೆಯ ಬಳಿಕವೂ ಆಂಧ್ರ ಪ್ರದೇಶಕ್ಕೆ ಅನ್ಯಾಯ: ಸಿಎಂ ಚಂದ್ರಬಾಬು ನಾಯ್ಡು
ವಿಶೇಷ ಸ್ಥಾನಮಾನ ನೀಡುವ ಕುರಿತು ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಜು ಅವರು ಸೋಮವಾರ ಹೇಳಿದ್ದಾರೆ.

Published On :
ವಿಜಯವಾಡ: ವಿಶೇಷ ಸ್ಥಾನಮಾನ ನೀಡುವ ಕುರಿತು ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಜು ಅವರು ಸೋಮವಾರ ಹೇಳಿದ್ದಾರೆ.
ಸೋಮವಾರ ನಡೆದ ಅಲ್ಪಸಂಖ್ಯಾತರ ಸಮುದಾಯದ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು ಅವರು, ಎನ್ ಡಿಎ ಮೈತ್ರಿಕೂಟದ ಸದಸ್ಯರಾಗಿ ನಾವು ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ನೆರವು ದೊರೆಯಲಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ಸಿಗಲಿದೆ ಎಂದು ಭಾವಿಸಿದ್ದೆವು. ಇದೇ ಕಾರಣಕ್ಕೆ ಕಳೆದ ನಾಲ್ಕು ವರ್ಷಗಳಿಂದ ಶಾಂತವಾಗಿದ್ದೆವು. ಆದರೆ ಈ ವರೆಗೂ ನಮಗೆ ಕೇಂದ್ರ ನೀಡಿದ್ದ ಭರವಸೆಗಳು ಹಾಗೆಯೇ ಇದ್ದು, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಕನಿಷ್ಠ ಪಕ್ಷ ಕೊನೆಯ ಬಜೆಟ್ ನಲ್ಲಾದರೂ ರಾಜ್ಯಕ್ಕೆ ಯಾವುದಾದರೂ ವಿಶೇಷ ಪ್ಯಾಕೇಜ್ ದೊರೆಯುವ ಆಸೆ ಇತ್ತು. ಅದೂ ಆಗಿಲ್ಲ ಎಂದು ನಾಯ್ಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ತ್ರಿವಳಿ ತಲಾಖ್ ಕುರಿತ ಮಾತನಾಡಿದ ನಾಯ್ಡು, ತ್ರಿವಳಿ ತಲಾಖ್ ಕುರಿತು ಧನಿ ಎತ್ತಿದ್ದು ಟಿಡಿಪಿಯೇ ಹೊರತು ವೈಎಸ್ ಆರ್ ಕಾಂಗ್ರೆಸ್ ಪಕ್ಷವಲ್ಲ. ಕೇಂದ್ರ ಸರ್ಕಾರ ತ್ರಿವಳಿ ತಲ್ಲಾಖ್ ಅನ್ನು ಕಾನೂನು ಬಾಹಿರ ಮಾಡಿದ್ದನ್ನು ಪ್ರಶ್ನಿಸಿದ್ದೇ ನಾವು. ತ್ರಿವಳಿ ತಲಾಖ್ ಕಾನೂನು ಬಾಹಿರಗೊಳಿಸದಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ್ದೆವು ಎಂದು ನಾಯ್ಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


