ಪರಸ್ಪರ ಗುಂಡಿನ ದಾಳಿ ನಿಲ್ಲಿಸುವಂತೆ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನಕ್ಕೆ ಮೆಹಬೂಬಾ ಮುಫ್ತಿ ಮನವಿ
ಅಂತಾರಾಷ್ಟ್ರೀಯ ಗಡಿ ರೇಖೆ ಪೊಂಚ್ ಬಳಿ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವುದರಿಂದ...

ಜಮ್ಮು-ಕಾಶ್ಮೀರ: ಅಂತಾರಾಷ್ಟ್ರೀಯ ಗಡಿ ರೇಖೆ ಪೊಂಚ್ ಬಳಿ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವುದರಿಂದ ನಾಗರಿಕರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಪರಸ್ಪರ ಗುಂಡಿನ ದಾಳಿ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನಕ್ಕೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮನವಿ ಮಾಡಿದ್ದಾರೆ.
ಇದು ಬಹಳ ಕೆಟ್ಟದಾಗಿದೆ. ಭಾರತ ಹಾಗೂ ಪಾಕಿಸ್ತಾನದ ವೈರತ್ವಕ್ಕೆ ಜಮ್ಮು-ಕಾಶ್ಮೀರದ ನೂರಾರು ಜನರು ಬಲಿಯಾಗುತ್ತಿದ್ದಾರೆ. ಉಭಯ ದೇಶದ ಕಡೆಯಿಂದ ಅಲ್ಲಿನ ಜನರು ಸಾಯುತ್ತಿದ್ದು, ಪಾಕಿಸ್ತಾನ ಗುಂಡಿನ ದಾಳಿ ನಡೆಸುವುದನ್ನು ತಡೆಗಟ್ಟಬೇಕಾಗಿದೆ ಭಾರತವೂ ಕೂಡಾ ನಿಲ್ಲಿಸುವಂತೆ ಪ್ರಧಾನಿಗೆ ಮನವಿ ಮಾಡುವುದಾಗಿ ಮೆಹಬೂಬಾ ಮುಫ್ತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಸಂಪೂರ್ಣ ನಿಯಂತ್ರಣಕ್ಕೆ ಬಂದು ಅಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಹೋಗುವಂತಾಗಬೇಕು ಹಾಗೂ ಅಲ್ಲಿನ ಜನರು ಶಾಂತಿ ಬಯಸಿದ್ದಾರೆ ಎಂದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 2003ರಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಶಾಂತಿ ನೆಲೆಸುವಂತೆ ಮಾಡಿದ್ದರು. ನರೇಂದ್ರಮೋದಿ ಕೂಡಾ 2015ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದರೂ ಕೂಡಾ ಪಠಾಣ್ ಕೋಟ್ ಮೇಲೆ ಉಗ್ರರ ದಾಳಿ ನಡೆದಿರುವುದು ದುರದೃಷ್ಟಕರ ಸಂಗತಿ ಎಂದರು.
ಭಾನುವಾರ ಪಾಕಿಸ್ತಾನದ ಬಾಲಕೋಟ್ ಬಳಿ ಪಾಕಿಸ್ತಾನ ಉಗ್ರರು ನಡೆಸಿದ ಶೆಲ್ ದಾಳಿಯಲ್ಲಿ ಐವರು ನಾಗರಿಕರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಭಾರತ ಹಾಗೂ ಪಾಕಿಸ್ತಾನದ ಸೈನಿಕರು ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ನಿರಂತರವಾಗಿ ಭಾರೀ ಗುಂಡಿ ದಾಳಿ ನಡೆಸುತ್ತಿದ್ದು, ಜನರು ಆತಂಕದಲ್ಲಿಯೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


