ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಭರತ್ ಸಿನ್ಹಾ ಸೋಲಂಕಿ ರಾಜಿನಾಮೆ
ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭರತ್ ಸಿನ್ಹಾ ಸೋಲಂಕಿ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Published On :
ನವದೆಹಲಿ: ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭರತ್ ಸಿನ್ಹಾ ಸೋಲಂಕಿ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸೋಲಂಕಿ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್, 2015ರಿಂದ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋಲಂಕಿ ದಿಢೀರ್ ರಾಜಿನಾಮೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.
ಸೋಲಂಕಿ ಅವರು ಯುಪಿಎ-2 ಸರ್ಕಾರದಲ್ಲಿ ಸ್ವತಂತ್ರ ಖಾತೆ ರಾಜ್ಯ ಸಚಿವರಾಗಿ ಹಾಗೂ 2004ರಿಂದ 2006ರ ವರೆಗೆ ಎಐಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


