ಅಲ್ಪಸಂಖ್ಯಾತರ ಕಡೆಗೂ ಬಿಜೆಪಿ ಗಮನ ಹರಿಸಬೇಕು: ರಾಮ್ ವಿಲಾಸ್ ಪಾಸ್ವಾನ್
ಭಾರತೀಯ ಜನತಾ ಪಕ್ಷ ತನ್ನ ನಡವಳಿಕೆಯನ್ನು ಬದಲಾಯಿಸಿಕೊಂಡು ಅಲ್ಪ ಸಂಖ್ಯಾತರ ಕಡೆಗೂ ಗಮನ ಹರಿಸಬೇಕು ಎಂದು ಗ್ರಾಹಕರ ವ್ಯವಹಾರಗಳ ಸಚಿವ ರಾಮ್ ...

Published On :
ಪಾಟ್ನಾ: ಭಾರತೀಯ ಜನತಾ ಪಕ್ಷ ತನ್ನ ನಡವಳಿಕೆಯನ್ನು ಬದಲಾಯಿಸಿಕೊಂಡು ಅಲ್ಪ ಸಂಖ್ಯಾತರ ಕಡೆಗೂ ಗಮನ ಹರಿಸಬೇಕು ಎಂದು ಗ್ರಾಹಕರ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ಬಿಜೆಪಿ ತನ್ನ ಸಾಮೂಹಿಕ ಗ್ರಹಿಕೆಯನ್ನು ಬದಲಾಯಿಸಿಕೊಂಡು ಅಲ್ಪಸಂಖ್ಯಾತರು, ದಲಿತರ ಬಗ್ಗೆಗ್ಗಿನ ಮನೋಭಾವನೆ ಬದಲಾಯಿಸಿಕೊಳ್ಳಬೇಕು ಎಂದು ಹೇಳಿದ್ಗಾರ.
ಎನ್ ಡಿ ಎ ಮೈತ್ರಿಕೂಟದ ಅಂಗಪಕ್ಷವಾದ ಲೋಕ ಜನಶಕ್ತಿ ಪಕ್ಷದ ರಾಮ್ ವಿಲಾಸ್ ಪಾಸ್ವಾನ್, ಬಿಜೆಪಿಯಲ್ಲಿ ಜಾತ್ಯಾತೀತ ನಾಯಕರು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಸುಶೀಲ್ ಮೋದಿ, ರಾಮ್ ಕೃಪಾಲ್ ಯಾದವ್ ಮುಂತಾದ ನಾಯಕರ ಧ್ವನಿ ಹತ್ತಿಕ್ಕಿದ್ದರೇ ಬೇರೆ ಯಾವ ನಾಯಕರು ಧ್ವನಿ ಎತ್ತಲು ಸಾಧ್ಯ ಎಂದು ಪಾಸ್ವಾನ್ ಪ್ರಶ್ನಿಸಿದ್ದಾರೆ.
ಮಾರ್ಚ್ 14 ರಂದು ಪಾಸ್ವಾನ್ ಪುತ್ರ ಹಾಗೂ ಸಂಸದ ಚಿರಾಗ್ ಪಾಸ್ವಾನ್ ಉಪ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿ ಎಲ್ಲರ ಗಮನ ಸೆಳೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


