ದೇಶ

ಸರ್ಕಾರದ ಅನುಮತಿಯಿಲ್ಲದೆ ಮೇಜರ್ ಆದಿತ್ಯಾ ವಿರುದ್ಧ ಎಫ್ಐಆರ್ ದಾಖಲು ಸಾಧ್ಯವಿಲ್ಲ; 'ಸುಪ್ರೀಂ'ಗೆ ಕೇಂದ್ರ

ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ ನಡೆಸಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿಯಿಲ್ಲದೆಯೇ ಮೇಜರ್ ಆದಿತ್ಯಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಸೋಮವಾರ ತಿಳಿಸಿದೆ...

ಸರ್ಕಾರದ ಅನುಮತಿಯಿಲ್ಲದೆ ಮೇಜರ್ ಆದಿತ್ಯಾ ವಿರುದ್ಧ ಎಫ್ಐಆರ್ ದಾಖಲು ಸಾಧ್ಯವಿಲ್ಲ; 'ಸುಪ್ರೀಂ'ಗೆ ಕೇಂದ್ರ
ಸಂಗ್ರಹ ಚಿತ್ರ
Published On :
ನವದೆಹಲಿ: ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ ನಡೆಸಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿಯಿಲ್ಲದೆಯೇ ಮೇಜರ್ ಆದಿತ್ಯಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಸೋಮವಾರ ತಿಳಿಸಿದೆ. 
ಜ.27ರಂದು ಶೋಪಿಯಾನ್ ಜಿಲ್ಲೆಯಲ್ಲಿ ಕಲ್ಲುತೂರಾಟ ನಡೆಸಲಾಗಿತ್ತು. ಈ ವೇಳೆ ಕಲ್ಲು ತೂರಾಟಗಾರರನ್ನು ನಿಯಂತ್ರಿಸುವ ಸಲುವಾಗಿ ಸೇನೆ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಕಲ್ಲು ತೂರಾಟಗಾರರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೇಜರ್ ಆದಿತ್ಯಾ ಸೇರಿದಂತೆ ಇನ್ನಿತರೆ ಭದ್ರತಾ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಆದಿತ್ಯಾ ಅವರ ತಂದೆ ಲೆ.ಕ.ಕರಮವೀರ್ ಸಿಂಗ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು, 
ಮೇಜರ್ ಆದಿತ್ಯಾ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತಂತೆ ಸುಪ್ರೀಂಕೋರ್ಟ್'ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ಪ್ರಕರಣವನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೆಕ್ಷನ್ 7 ರ ಜಮ್ಮು ಮತ್ತು ಕಾಶ್ಮೀರ ವಿಶೇಷ ಸಶಸ್ತ್ರ ಪಡೆಗಳ ಶಕ್ತಿ ಮಸೂದೆ ಅಡಿಯಲ್ಲಿ, ಉತ್ತಮ ಕಾರ್ಯಗಳ ಉದ್ದೇಶಕ್ಕಾಗಿ ಜನರನ್ನು ರಕ್ಷಣೆ ಮಾಡಲಾಗುತ್ತದೆ. ಈ ಕಾಯ್ದೆಯಡಿಯಲ್ಲಿ ಕೆಲಸ ಮಾಡುವ ಯಾವುದೇ ಅಧಿಕಾರಿ ಅಥವಾ ಭದ್ರತಾ ಸಿಬ್ಬಂದಿ ವಿರುದ್ಧ ಯಾವುದೇ ಪ್ರಕರಣಗಳಾಗಲೀ, ದಾವೆಗಳಾಗಲೀ ಅಥವಾ ಕ್ರಮಗಳಾಗಲಿ ಕೈಗೊಳ್ಳಲು ಸಾಧ್ಯವಿಲ್ಲ. ಹಿಂದಿನ ಅನುಮತಿಯನ್ನು ಹೊರತುಪಡಿಸಿ ಈ ಅಧಿನಿಯಮದ ಅಡಿಯಲ್ಲಿ ನೀಡಲ್ಪಟ್ಟ ಅಧಿಕಾರದಲ್ಲಿ ಯಾವುದೇ ಕೆಲಸ ಬಗ್ಗೆ, ಯಾವುದೇ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.