ದೇಶ

ಪತಿ ನಟರಾಜನ್ ನಿಧನ: 15 ದಿನಗಳ ಪೆರೋಲ್'ಗೆ ಶಶಿಕಲಾ ಅರ್ಜಿ

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಪತಿ ನಟರಾಜನ್ ನಿಧನ: 15 ದಿನಗಳ ಪೆರೋಲ್'ಗೆ ಶಶಿಕಲಾ ಅರ್ಜಿ
ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ
Published On :
ಬೆಂಗಳೂರು: ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ದೋಷಿಯಾಗಿರುವ ಶಶಕಲಾ ಅವರು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ 4 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಪತಿಯ ನಿಧರನ ಹಿನ್ನಲೆಯಲ್ಲಿ ಪೆರೋಲ್ ಮೇಲೆ ಹೊರಗೆ ಬರಲಿರುವ ಶಶಿಕಲಾ ಅವರು ಚೆನ್ನೈನತ್ತ ಪ್ರಯಾಣ ಬೆಳೆಸಲಿದ್ದಾರೆ. 
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟರಾಜನ್ ಅವರನ್ನು ನೋಡುವ ಸಲುವಾಗಿ ಶಶಿಕಲಾ ಅವರು 5 ದಿನಗಳ ಪೆರೋಲ್ ಪಡೆದು ಹೊರಗೆ ಬಂದಿದ್ದರು. 
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಶಿಕಲಾ ಅವರ ಪತಿ ನಟರಾಜನ್ ಅವರು ಚೆನ್ನೈನ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.