ದೇಶ

ಇರಾಕ್'ನಲ್ಲಿ ಭಾರತೀಯರ ಹತ್ಯೆ: ಕೇಂದ್ರ ದೇಶವನ್ನು ತಪ್ಪು ಹಾದಿಗೆಳೆಯಿತು- ಸಲ್ಮಾನ್ ಖುರ್ಷಿದ್

ಇರಾಕ್ ನಲ್ಲಿ ನಾಪತ್ತೆಯಾಗಿದ್ದ 29 ಭಾರತೀಯರನ್ನು ಇಸಿಸ್ ಉಗ್ರರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ಕೇಂದ್ರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

ಇರಾಕ್'ನಲ್ಲಿ ಭಾರತೀಯರ ಹತ್ಯೆ: ಕೇಂದ್ರ ದೇಶವನ್ನು ತಪ್ಪು ಹಾದಿಗೆಳೆಯಿತು- ಸಲ್ಮಾನ್ ಖುರ್ಷಿದ್
ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್
Published On :
ನವದೆಹಲಿ: ಇರಾಕ್ ನಲ್ಲಿ ನಾಪತ್ತೆಯಾಗಿದ್ದ 29 ಭಾರತೀಯರನ್ನು ಇಸಿಸ್ ಉಗ್ರರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ಕೇಂದ್ರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯರ ಹತ್ಯೆಯಾಗಿರುವುದನ್ನು ದೃಢೀಕರಿಸಲು ವಿದೇಶಾಂಗ ಸಚಿವಾಲಯ ಸುಧೀರ್ಘ ಸಮಯವನ್ನು ತೆಗೆದುಕೊಂಡಿತು. ವಿದೇಶಾಂಗ ಸಚಿವರು ಹೇಳುತ್ತಿರುವುದು ಅರ್ಥವಾಗುತ್ತದೆ. ಆದರೆ, ಸತ್ಯವನ್ನು ಖಚಿತಪಡಿಸಿಕೊಳ್ಳುವಲ್ಲಿ ಕೇಂದ್ರ ತನ್ನ ಅಸಾಮರ್ಥ್ಯವನ್ನು ಪ್ರದರ್ಶಿಸಿದೆ. ಈ ಮೂಲಕ ದೇಶದ ಜನತೆಯನ್ನು ತಪ್ಪು ಹಾದಿಗೆಳೆದಿದೆ ಎಂದು ಹೇಳಿದ್ದಾರೆ. 
ಅಲ್ಲದೆ, ಇದೇ ವೇಳೆ ಪ್ರಕರಣ ಸಂಬಂಧ ಯಾರೂ ರಾಜಕೀಯ ಮಾಡಬಾರದು ಎಂದು ಮನವಿ ಮಾಡಿಕೊಂಡಿರುವ ಅವರು, ಮೃತ ಭಾರತೀಯರಿಗೆ ಸಂತಾಪದಲ್ಲಿ ಭಾಗಿಯಾಗಬೇಕೆಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ರಾಜ್ಯಸಭೆಯಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರನ್ನು ಇಸಿಸ್ ಉಗ್ರರು ಹತ್ಯೆ ಮಾಡಿದ್ದು, ಸಾಮೂಹಿಕ ಸಮಾಧಿ ಮಾಡಿದ್ದಾರೆಂಬ ಆಘಾತಕಾರಿ ಮಾಹಿತಿಯನ್ನು ದೃಢಪಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.