ದೇಶ

ಪಂಜಾಬ್: ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ 18 ಲಕ್ಷ ರೂ. ನಗದು ದೋಚಿದ ದರೋಡೆಕೋರರು

ಖಾಸಗಿ ಭದ್ರತಾ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ದರೋಡೆಕೋರರು, ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಸುಮಾರು 18 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಪಂಜಾಬ್: ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ 18 ಲಕ್ಷ ರೂ. ನಗದು ದೋಚಿದ ದರೋಡೆಕೋರರು
ಸಂಗ್ರಹ ಚಿತ್ರ
Published On :
ಲೂಧಿಯಾನ: ಖಾಸಗಿ ಭದ್ರತಾ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ದರೋಡೆಕೋರರು, ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಸುಮಾರು 18 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಪಂಜಾಬ್ ನ ಲೂಧಿಯಾನ- ಫಿರೋಜ್ ಪುರ್ ರಸ್ತೆಯಲ್ಲಿರುವ ಹೆಚ್ ಡಿಎಫ್ ಸಿ ಬ್ಯಾಂಕ್ ಬಳಿ ಈ ಘಟನೆ ನಡೆದಿದ್ದು, ಖಾಸಗಿ ಭದ್ರತಾ ಸಿಬ್ಬಂದಿಗಳು ಬ್ಯಾಂಕ್ ಗೆ ಹಣ ರವಾನೆ ಮಾಡುತ್ತಿದ್ದಾಗ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಬಳಿಕ ಹಣದೊಂದಿಗೆ ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ದರೋಡೆ ಕೃತ್ಯ ಅದರಲ್ಲಿಸೆರೆಯಾಗಿರುವ ಸಾಧ್ಯತೆಗಳಿರುವುದರಿಂದ ಅವುಗಳನ್ನು ಪೊಲೀಸರು ಪರಿಶೀಲನೆಗೆ ಒಳಪಡಿಸಿದ್ದಾರೆ.
ಖಾಸಗಿ ಭದ್ರತಾ ಸಿಬ್ಬಂದಿಗಳು ಬ್ಯಾಂಕ್ ಗೆ ಹಣ ತಂದಾಗ ಅವರ ಮೇಲೆ ದಾಳಿ ಮಾಡಿದ ದರೋಡೆಕೋರರು, ಅವರ ಮೇಲೆ ಗುಂಡಿನ ದಾಳಿ ನಡೆಸಿ ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಲೂಧಿಯಾನ ಪೊಲೀಸ್ ಆಯುಕ್ತ ಆರ್ ಎನ್ ಧೋಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.