ದೇಶ

39 ಭಾರತೀಯರ ಸಾವಿನ ವಿಚಾರ ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ: ಟ್ವಿಟರ್ ನಲ್ಲಿ ರಮ್ಯಾ ತಿರುಗೇಟು

ಫೇಸ್ ಬುಕ್ ಬಳಕೆದಾರರ ಮಾಹಿತಿ ಸೋರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕೈವಾಡದ ಕುರಿತು ಕೇಂದ್ರ ಸರ್ಕಾರ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥರಾದ ನಟಿ ರಮ್ಯಾ ಹೇಳಿದ್ದಾರೆ.

39 ಭಾರತೀಯರ ಸಾವಿನ ವಿಚಾರ ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ: ಟ್ವಿಟರ್ ನಲ್ಲಿ ರಮ್ಯಾ ತಿರುಗೇಟು
ಸಂಗ್ರಹ ಚಿತ್ರ
Published On :
ನವದೆಹಲಿ: ಫೇಸ್ ಬುಕ್ ಬಳಕೆದಾರರ ಮಾಹಿತಿ ಸೋರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕೈವಾಡದ ಕುರಿತು ಕೇಂದ್ರ ಸರ್ಕಾರ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥರಾದ ನಟಿ ರಮ್ಯಾ ಹೇಳಿದ್ದಾರೆ.
ಕೇಂದ್ರ ಸಚಿವ ರವಿಶಂಕರ್ ಆರೋಪಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ರಮ್ಯಾ, ಬಿಜೆಪಿ ಆರೋಪ ಸತ್ಯಕ್ಕೆ ದೂರವಾದದ್ದು. ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯೊಂದಿಗೆ ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ನಂಟು ಹೊಂದಿಲ್ಲ. ನೀವು ಮಾಡಿರುವ ಆರೋಪಗಳ ಕುರಿತು ನಿಮ್ಮ ಬಳಿ ಸೂಕ್ತ ಸಾಕ್ಷ್ಯಾಧಾರಾಗಳು ಇದ್ದರೆ ನಿರೂಪಿಸಿ ಎಂದು ಸವಾಲೆಸೆದಿದ್ದಾರೆ.
ಅಲ್ಲದೆ ಕೇಂದ್ರ ಇರಾಕ್ ನಲ್ಲಿ ಹತ್ಯೆಗೀಡಾದ 39 ಮಂದಿ ಭಾರತೀಯರ ವಿಚಾರವನ್ನು ಮರೆ ಮಾಚಲು ಕೇಂದ್ರ ಸರ್ಕಾರ ಇಂತಹ ಕ್ಷುಲ್ಲಕ ಆರೋಪ ಮಾಡುತ್ತಿದ್ದು, ಈ ಹಿಂದೆಯೂ ಕೂಡ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿನ ಜನಪ್ರಿಯತೆ ಕುರಿತು ಇದೇ ಬಿಜೆಪಿ ಇಲ್ಲ ಸಲ್ಲದ ಆರೋಪ ಮಾಡಿತ್ತು ಎಂದು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಆರೋಪ ಮಾಡುತ್ತಿರುವ ಇದೇ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ 2014ರಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲಲ್ಲು ನೆರವು ನೀಡಿತ್ತು ಎಂದು ಲಿಂಕ್ಡ್ ಇನ್ ಪೇಜ್ ನಲ್ಲಿ ಬಂದ ವರದಿಯನ್ನು ರಮ್ಯಾ ಟ್ವೀಟ್ ಮಾಡುವ ಮೂಲಕ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯೊಂದಿಗೆ ಬಿಜೆಪಿಗೆ ಸಂಬಂಧವಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.
ಒಟ್ಟಾರೆ ಫೇಸ್ ಬುಕ್ ಮಾಹಿತಿ ಸೋರಿಕೆ ಸಂಬಂಧ ಪ್ರಸ್ತುತ ಉಂಟಾಗಿರುವ ವಿವಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.