ಆಯುಷ್ ಮಾನ್ ಭಾರತ್ ಗೆ ಕೇಂದ್ರ ಸಂಪುಟ ಅಸ್ತು, 50 ಕೋಟಿ ಜನತೆಗೆ ಆರೋಗ್ಯ ವಿಮೆ
ದೇಶದ ಅರ್ಧದಷ್ಟು ಜನತೆಗೆ ಆರೋಗ್ಯ ವಿಮೆ ಕಲ್ಪಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಬಹು ನಿರೀಕ್ಷಿತ ಆಯುಷ್ ಮಾನ್....

Published On :
ನವದೆಹಲಿ: ದೇಶದ ಅರ್ಧದಷ್ಟು ಜನತೆಗೆ ಆರೋಗ್ಯ ವಿಮೆ ಕಲ್ಪಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಬಹು ನಿರೀಕ್ಷಿತ ಆಯುಷ್ ಮಾನ್ ಭಾರತ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ(ಎಬಿ-ಎನ್ ಎಚ್ ಪಿಎಂ)ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರ 2018ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿರುವ ಆಯುಷ್ ಮಾನ್ ಭಾರತ್ ಅಥವಾ ಮೋದಿ ಕೇರ್ ಯೋಜನೆಯಲ್ಲಿ ಭಾರತದ 10 ಕೋಟಿ ಬಡ ಕುಟುಂಬಗಳ 50 ಕೋಟಿ ಜನರು ವಾರ್ಷಿಕ 5 ಲಕ್ಷ ರು.ಗಳವರೆಗೆ ಆರೋಗ್ಯ ವಿಮೆ ಪಡೆಯಲಿದ್ದಾರೆ.
ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ಯೋಜನೆ ಇದಾಗಿದ್ದು, ಎಬಿ-ಎನ್ ಎಚ್ ಪಿಎಂ ಯೋಜನೆ ಅಡಿ ದೇಶದ ಯಾವುದೇ ಭಾಗದಲ್ಲೂ ಚಿಕಿತ್ಸೆ ಪಡೆಯಬಹುದಾಗಿದ್ದು, ಇದು ಸಂಪೂರ್ಣ ಪೇಪರ್ ಲೆಸ್ ಮತ್ತು ಕ್ಯಾಶ್ ಲೆಸ್ ಆಗಿದೆ.
ಈ ಯೋಜನೆ ಏಪ್ರಿಲ್ 1, 2018ರಿಂದ ಜಾರಿಗೆ ಬರುವ ಸಾಧ್ಯತೆ ಇದ್ದು, ಇದಕ್ಕಾಗಿ ಕೇಂದ್ರ ಸರ್ಕಾರ 2018-19ನೇ ಸಾಲಿಗೆ ಬಜೆಟ್ ನಲ್ಲಿ 2 ಸಾವಿರ ಕೋಟಿ ರುಪಾಯಿ ಅನುದಾನ ಒದಗಿಸಿದೆ. ಅಲ್ಲದೆ ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


