ಪರಿಸ್ಥಿತಿ ಹದಗೆಡದಿದ್ದರೆ ಕಾಶ್ಮೀರ ದೆಹಲಿಗೆ ಸಮನಾಗಿರುತ್ತಿತ್ತು: ಜಿತೇಂದ್ರ ಸಿಂಗ್
ಪರಿಸ್ಥಿತಿ ಹದಗೆಡದೇ ಇದ್ದಿದ್ದರೆ, ಜಮ್ಮು ಮತ್ತು ಕಾಶ್ಮೀರ ರಾಜಧಾನಿ ದೆಹಲಿ ಹಾಗೂ ಹೈದರಾಬಾದ್'ನ್ನು ಹಿಂದಿಕ್ಕುತ್ತಿತ್ತು ಎಂದು ಕೇಂದ್ರ ಆಂತರಿಕ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ...

Published On :
ನವದೆಹಲಿ: ಪರಿಸ್ಥಿತಿ ಹದಗೆಡದೇ ಇದ್ದಿದ್ದರೆ, ಜಮ್ಮು ಮತ್ತು ಕಾಶ್ಮೀರ ರಾಜಧಾನಿ ದೆಹಲಿ ಹಾಗೂ ಹೈದರಾಬಾದ್'ನ್ನು ಹಿಂದಿಕ್ಕುತ್ತಿತ್ತು ಎಂದು ಕೇಂದ್ರ ಆಂತರಿಕ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಅವರು, ರಾಜ್ಯದಲ್ಲಿರುವ ಕೆಟ್ಟ ಪರಿಸ್ಥಿತಿಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಿಂದುಳಿದಿದೆ. 25-26 ವರ್ಷಗಳಿಂದ ಇಲ್ಲಿನ ಪರಿಸ್ಥಿತಿ ಹದಗೆಡದೇ ಹೋಗಿದ್ದರೆ, ಜಮ್ಮು ಮತ್ತು ಕಾಶ್ಮೀರ ಉತ್ತಮ ನಾಡಾಗುತ್ತಿತ್ತು ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡದೇ ಹೋಗಿದ್ದರೆ, ದೆಹಲಿ ಹಾಗೂ ಹೈದರಾಬಾದ್ ನಗರಗಳನ್ನು ಹಿಂದಿಕ್ಕುತ್ತಿತ್ತು. ಇದೀಗ ಸಮಯ ಬದಲಾಗಿದ್ದು, ಯುವಕರಿಗೆ ಹೆಚ್ಚಿನ ಮಾಹಿತಿ ತಿಳಿದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


