ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ಪ್ರಸ್ತಾವನೆ ತಿರಸ್ಕರಿಸಿದ ಲೆಫ್ಟಿನೆಂಟ್ ಗವರ್ನರ್
ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ನೀಡುವ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್....

Published On :
ನವದೆಹಲಿ: ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ನೀಡುವ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ತಿರಸ್ಕರಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ. ಅಲ್ಲದೆ 'ಕ್ಷುಲ್ಲಕ ರಾಜಕೀಯಕ್ಕೆ' ಮಹತ್ವದ ಯೋಜನೆ ಬಲಿಯಾಗಿದೆ ಎಂದು ಆರೋಪಿಸಿದ್ದಾರೆ.
ನಮ್ಮ ಮಾತು ಕೇಳಿಸಿಕೊಳ್ಳಿ ಎಂದು ನಾನು ಹಲವು ಬಾರಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಮನವಿ ಮಾಡಿದ್ದೆ. ಆದರೆ ಅವರು ಕೇಳಿಸಿಕೊಳ್ಳಲಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪಡಿತರವನ್ನು ಸೀಲ್ ಮಾಡಿದ ಪಾಕೇಟ್ ಗಳಲ್ಲಿ ಮನೆ ಬಾಗಿಲಿಗೇ ವಿತರಿಸಲು ದೆಹಲಿ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು, ದೆಹಲಿಯ ಬಡ ಜನತೆಯ ಪರದಾಟವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆಯನ್ನು ಪರಿಗಣಿಸುವಂತೆ ಲೆಫ್ಟಿನೆಂಟ್ ಗವರ್ನರ್ ಗೆ ಮನವಿ ಮಾಡಿದ್ದಾರೆ.
ಪಡಿತರ ಕಳ್ಳತನ, ಕಳಪೆ ಗುಣಮಟ್ಟದ ಪಡಿತರ ಹಾಗೂ ನ್ಯಾಯಬೆಲೆ ಅಂಗಡಿ ಮುಂದೆ ಕ್ಯೂ ನಿಲ್ಲುವುದನ್ನು ತಪ್ಪಿಸುವುದಕ್ಕಾಗಿ ದೆಹಲಿ ಈ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Delhi governmentದೆಹಲಿ ಸರ್ಕಾರLt Governor Anil Baijaldoorstep delivery of rationಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ಮನೆ ಬಾಗಿಲಿಗೆ ಪಡಿತರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


