ಇರಾಕ್'ನಲ್ಲಿ ಭಾರತೀಯರ ಹತ್ಯೆ: ಲೋಕಸಭೆಯಲ್ಲಿ ತೀವ್ರ ಗದ್ದಲ, ಕಾಂಗ್ರೆಸ್ ವಿರುದ್ಧ ಸುಷ್ಮಾ ಸ್ವರಾಜ್ ತೀವ್ರ ಕಿಡಿ
ಇರಾಕ್'ನ ಮೊಸುಲ್ ನಲ್ಲಿ 39 ಭಾರತೀಯರ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಲೋಕಸಭೆಯಲ್ಲಿ ತೀವ್ರ ಗದ್ದಲವುಂಟು ಮಾಡಿದ್ದ ಕಾಂಗ್ರೆಸ್ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತೀವ್ರ ಕಿಡಿ ಕಾರಿದ್ದಾರೆ...

Published On :
ನವದೆಹಲಿ: ಇರಾಕ್'ನ ಮೊಸುಲ್ ನಲ್ಲಿ 39 ಭಾರತೀಯರ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಲೋಕಸಭೆಯಲ್ಲಿ ತೀವ್ರ ಗದ್ದಲವುಂಟು ಮಾಡಿದ್ದ ಕಾಂಗ್ರೆಸ್ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತೀವ್ರ ಕಿಡಿ ಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯಸಭೆಯಲ್ಲಿ ಪ್ರತೀಯೊಬ್ಬರೂ ನನ್ನ ಮಾತುಕತಗಳನ್ನು ತಾಳ್ಮೆ ಹಾಗೂ ಶಾಂತಿಯುತದಿಂದ ಕೇಳುತ್ತಿದ್ದರು. ಪ್ರತೀಯೊಬ್ಬರೂ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದರು. ಲೋಕಸಭೆಯಲ್ಲಿಯೂ ಇದೇ ರೀತಿಯಾಗುತ್ತದೆ ಎಂದು ತಿಳಿದಿದ್ದೆ. ಆದರೆ, ಕಳೆದ ಹಲವು ದಿನಗಳಿಂದ ಗದ್ದಲವುಂಟು ಮಾಡಿದ ಹೊರತಾಗಿಯೂ ಕಾಂಗ್ರೆಸ್ ಪ್ರತಿಭಟನೆಗಳನ್ನು ಮುಂದುವರೆಸಿತ್ತು. ಇದು ನಿಜಕ್ಕೂ ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ಎಲ್ಲಾ ರೀತಿಯ ನಿಯಂತ್ರಣಗಳನ್ನು ಮೀರಿ ಕಾಂಗ್ರೆಸ್ ಇಂದು ಲೋಕಸಭೆಯಲ್ಲಿ ವರ್ತನೆ ತೋರಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


