ಅಮೆರಿಕದಲ್ಲಿ ಚಿಕಿತ್ಸೆ ಪರಿಕ್ಕರ್ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ: ಗೋವಾ ಮುಖ್ಯಮಂತ್ರಿ ಕಚೇರಿ
ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆಂದು ಗೋವಾ ಮುಖ್ಯಮಂತ್ರಿ ಕಚೇರಿ ಗುರುವಾರ ಹೇಳಿದೆ...

Published On :
ಪಣಜಿ: ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆಂದು ಗೋವಾ ಮುಖ್ಯಮಂತ್ರಿ ಕಚೇರಿ ಗುರುವಾರ ಹೇಳಿದೆ.
ಪ್ಯಾಂಕ್ರಿಯಾಟೈಸಿಸ್ ಸಮಸ್ಯೆಯಿಂದ ಬಳಲುತ್ತಿರುವ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರಿಕ್ಕರ್ ಅವರಿಗೆ ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮುಂದಿನ 2 ವಾರಗಳ ಬಳಿಕ ಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಪರಿಕ್ಕರ್ ಅವರ ಆಪ್ತ ಕಾರ್ಯದರ್ಶಿ ಹೇಳಿದ್ದಾರೆ.
ಪ್ಯಾಂಕ್ರಿಯಾಟೈಸಿಸ್ (ಮೇದೋಜೀರಕ ಗ್ರಂಥಿ) ತೊಂದರೆಯಿಂದ ಬಳಲುತ್ತಿರುವ ಪರಿಕ್ಕರ್ ಆರಂಭದ ಕೆಲವು ದಿನಗಳು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ನಡುವೆ ಆಸ್ಪತ್ರೆಯಿಂದ ಬಿಡುಗಡೆ ಪಡೆದು ಫೆಬ್ರುವರಿ 21ರಂದು ರಾಜ್ಯ ಬಜೆಟ್ ಮಂಡಿಸಿದ್ದರು. ಕೆಲದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆದಿದ್ದ ಅವರು ಗೋವಾ ಮೆಡಿಕಲ್ ಆಸ್ಪತ್ರೆಯಲ್ಲಿಯೂ ಕೆಲಕಾಲ ಚಿಕಿತ್ಸೆ ಪಡೆದಿದ್ದರು. ಮಾರ್ಚ್ 5ರಂದು ಮತ್ತೆ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ರವಾನೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


