ದ್ರಾವಿಡ ಭಾಷೆಗಳ ಉಗಮ 4,500 ವರ್ಷಗಳ ಹಿಂದಿನದ್ದು: ಅಧ್ಯಯನ ವರದಿ
ದ್ರಾವಿಡ ಭಾಷೆಗಳ ಉಗಮ 4,500 ವರ್ಷಗಳಷ್ಟು ಹಿಂದಿನದ್ದು ಎಂದು ಅಧ್ಯಯನ ವರದಿಯೊಂದರ ಮೂಲಕ ತಿಳಿದುಬಂದಿದೆ.

Published On :
ಲಂಡನ್: ದ್ರಾವಿಡ ಭಾಷೆಗಳ ಉಗಮ 4,500 ವರ್ಷಗಳಷ್ಟು ಹಿಂದಿನದ್ದು ಎಂದು ಅಧ್ಯಯನ ವರದಿಯೊಂದರ ಮೂಲಕ ತಿಳಿದುಬಂದಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳು ಉಗಮವಾಗಿದ್ದು 4,500 ವರ್ಷಗಳ ಹಿಂದೆ ಎಂದು ರಾಯಲ್ ಸೊಸೈಟಿ ಓಪನ್ ಸೈನ್ಸ್ ನ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ಹೇಳಿದೆ.
ನಾಲ್ಕು ದ್ರಾವಿಡ ಭಾಷೆಗಳಲ್ಲಿನ ಸಾಹಿತ್ಯಿಕ ಸಂಪ್ರದಾಯಗಳು ಶತ ಶತಮಾನಗಳಷ್ಟು ಹಳೆಯದ್ದಾಗಿದ್ದು, ಈ ಪೈಕಿ ತಮಿಳಿನ ಸಾಹಿತ್ಯ ಅತ್ಯಂತ ಪುರಾತನವಾದದ್ದು ಎಂದು ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ತಿಳಿಸಿದೆ.
ಸಂಸ್ಕೃತದೊಂದಿಗೆ ತಮಿಳು ಸಹ ವಿಶ್ವದ ಸಾಂಪ್ರದಾಯಿಕ ಭಾಷೆಗಳಲ್ಲಿ ಒಂದಾಗಿದ್ದು, ಸಂಸ್ಕೃತದಂತಲ್ಲದೇ ತಮಿಳಿನ ಸಾಹಿತ್ಯ ಹಾಗೂ ಶಾಸನಗಳು ಸಾಂಪ್ರದಾಯಿಕ ಹಾಗೂ ಆಧುನಿಕ ರೂಪಗಳ ನಡುವೆ ನಿರಂತರತೆಯನ್ನು ಹೊಂದಿದೆ ಎಂದು ಅಧ್ಯಯನ ವರದಿ ಹೇಳಿದೆ.
ಇತರ ಭಾಷೆಗಳ ಗುಂಪಿನ ಮೇಲೆ ಪ್ರಭಾವ ಬೀರಿರುವ ಹಿನ್ನೆಲೆಯಲ್ಲಿ ದ್ರಾವಿಡ ಭಾಷೆಗಳ ಅಧ್ಯಯನ ಯುರೇಷಿಯಾದ ಪೂರ್ವ ಇತಿಹಾಸ ತಿಳಿಯುವುದಕ್ಕೆ ಸಹಕಾರಿ ಎಂದು ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್ ನ ಮಾನವ ವಿಜ್ಞಾನದ ಇತಿಹಾಸ ವಿಭಾಗದ ಅನ್ನಮೆರಿ ವರ್ಕರ್ಕ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


