ದೇಶ

ಜರ್ಮನಿ ಅಧ್ಯಕ್ಷ ಸ್ಟೈನ್ಮಿಯರ್‌ ಭಾರತಕ್ಕೆ ಆಗಮನ

ಜರ್ಮನಿ ಅಧ್ಯಕ್ಷ ಫ್ರಾಂಕ್‌ ವಾಲ್ಟರ್‌ ಸ್ಟೈನ್ಮಿಯರ್‌ ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ.

ಜರ್ಮನಿ ಅಧ್ಯಕ್ಷ ಸ್ಟೈನ್ಮಿಯರ್‌ ಭಾರತಕ್ಕೆ ಆಗಮನ
ಜರ್ಮನಿ ಅಧ್ಯಕ್ಷ ಸ್ಟೈನ್ಮಿಯರ್‌ ಭಾರತಕ್ಕೆ ಆಗಮನ
Published On :
ನವದೆಹಲಿ: ಜರ್ಮನಿ ಅಧ್ಯಕ್ಷ ಫ್ರಾಂಕ್‌ ವಾಲ್ಟರ್‌ ಸ್ಟೈನ್ಮಿಯರ್‌ ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ.
ಕೇಂದ್ರ  ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯ ಸಚಿವ ಎಸ್.ಎಸ್. ಅಹ್ಲುವಾಲಿಯಾ ಜರ್ಮನ್ ಅಧ್ಯಕ್ಷ ಹಾಗೂ ಅವರ ಪತ್ನಿ ಎಲ್ಕೆ ಬುಡೆನ್ಬೆಂಡರ್ ಅವರನ್ನು ಸ್ವಾಗತಿಸಿದರು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷ ಫ್ರಾಂಕ್‌ ವಾಲ್ಟರ್‌ ಸ್ಟೈನ್ಮಿಯರ್‌ ಮತ್ತು ಶ್ರೀಮತಿ ಎಲ್ಕೆ ಬುಡೆನ್ಬೆಂಡರ್ ಗೆ ಭಾರತಕ್ಕೆ ಸ್ವಾಗತ! ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ಎಸ್.ಎಸ್. ಅಹ್ಲುವಾಲಿಯಾ ಗೌರವಾನ್ವಿತ ಅತಿಥಿಗಳಿಗೆ ಸ್ವಾಗತ ಕೋರಿದ್ದಾರೆ. ಎಂದು ಕುಮಾರ್ ಟ್ವೀಟ್ ನಲ್ಲಿ ಹೇಳಿದ್ದಾರೆ.
/div>

ವಾರಣಾಸಿ ಹಾಗೂ ಚೆನ್ನೈಗೆ ಭೇಟಿ ನೀಡಲಿರುವ ಸ್ಟೈನ್ಮಿಯರ್‌  ಮಾಧ್ಯಮ ಮಿತ್ರರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಿಇಓಗಳ ನಿಯೋಗದ ಜತೆ ಭಾರತಕ್ಕೆ ಆಗಮಿಸಿದ್ದಾರೆ.

ಜರ್ಮನಿಯ ಚಾನ್ಸಲರ್ ಆಗಿ ಏಂಜೆಲಾ ಮರ್ಕೆಲ್ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜರ್ಮನಿ ಅಧ್ಯಕ್ಷರು ಭಾರತಕ್ಕೆ ಭೇಟಿ ಕೊಡುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. 

ಕಳೆದ ವರ್ಷ ಮೇ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರವಾಸ ಕೈಗೊಂಡಿದ್ದರು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.