ದೇಶ

ಸಂಸತ್ತಿನಲ್ಲಿ ಮುಂದುವರೆದ ಗದ್ದಲ; ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ...

ಸಂಸತ್ತಿನಲ್ಲಿ ಮುಂದುವರೆದ ಗದ್ದಲ; ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಟಿಡಿಪಿ ಸಂಸದರು
Published On :
ನವದೆಹಲಿ: ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. 
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಟಿಡಿಪಿ, ವೈಎಸ್ಆರ್ ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ, ಎಡಿಎಂಕೆ ಸದಸ್ಯರು ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದಾರೆ. ಸದನದ ಬಾವಿಗಿಳಿದ ಟಿಡಿಪಿ ಸಂಸದರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ, ಅಲ್ಲದೆ, ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದ್ದಾರೆ.
ಈ ವೇಳೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಹಲವು ಬಾರಿ ಮನವಿ ಮಾಡಿಕೊಂಡರು ಟಿಡಿಪಿ ಸಂಸದರು ತಮ್ಮ ಪಟ್ಟು ಸಡಿಲಿಸದ ಹಿನ್ನಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ. 
ಕಲಾಪ ಮುಂದೂಡಿರುವುದಕ್ಕೆ ತೀವ್ರವಾಗಿ ಕಿಡಿಕಾರಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಸಭಾಪತಿಗಳು ಸದನದ ಕಲಾಪವನ್ನು ಯಾವ ಕಾರಣಕ್ಕೆ ಮುಂದೂಡಿದರು ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.