ಆಧಾರ್ ದತ್ತಾಂಶ ಸಂಪೂರ್ಣ ಸುರಕ್ಷಿತವಾಗಿದೆ: ಸುಪ್ರೀಂಗೆ ಯುಐಡಿಎಐ
ಆಧಾರ್ ಪಡೆಯಲು ನೀಡಿದ ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ ಮತ್ತು ಇದರ ....

Published On :
ನವದೆಹಲಿ: ಆಧಾರ್ ಪಡೆಯಲು ನೀಡಿದ ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ ಮತ್ತು ಇದರ ಕೊರತೆಯಿಂದಾಗಿ ಸೌಲಭ್ಯಗಳಿಂದ ಯಾರೂ ವಂಚಿತರಾಗಬೇಕಾಗಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ಗುರುವಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.
ಆಧಾರ್ ಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕೋರ್ಟ್ ನಲ್ಲಿ ಪವರ್ ಪಾಯಿಂಟ್ ಪ್ರಸೆಂಟೇಷನ್ ಮೂಲಕ ಉತ್ತರ ನೀಡಿದ ಯುಐಡಿಎಐ ಸಿಇಒ ಅಜಯ್ ಭೂಷಣ್ ಪಾಂಡ್ಯ ಅವರು, ಆಧಾರ್ ಗಾಗಿ ಜನರಿಂದ ಸಂಗ್ರಹಿಸಿದ ದತ್ತಾಂಶ ಸಂಪೂರ್ಣ ಸುರಕ್ಷಿತವಾಗಿ ಎಂದು ಹೇಳಿದ್ದಾರೆ.
ಹುಟ್ಟಿದ ಮಗುವಿನಿಂದಲೂ ನಾವು ಮಾಹಿತಿ ಸಂಗ್ರಹಿಸುತ್ತಿದ್ದು, ಇದನ್ನು ಎರಡು ಬಾರಿ ನವೀಕರಿಸಬಹುದಾಗಿ. ಐದನೇ ವಯಸ್ಸಿನಲ್ಲಿ ಮತ್ತು 15ನೇ ವರ್ಷದಲ್ಲಿ ನವೀಕರಿಸಬಹುದಾಗಿದೆ. ಈಗಾಗಲೇ 1.2 ಬಿಲಿಯನ್ ಭಾರತೀಯರು ಆಧಾರ್ ಪಡೆದಿದ್ದಾರೆ ಎಂದು ಪಾಂಡ್ಯ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠಕ್ಕೆ ವಿವರಿಸಿದರು.
ಒಂದು ಬಾರಿ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದರೆ ಅದು ಆ ವ್ಯಕ್ತಿ ಮರಣದ ನಂತರವೂ ಪುನರಾವರ್ತಿತವಾಗುವುದಿಲ್ಲ ಎಂದು ಪಾಂಡ್ಯ ಹೇಳಿದ್ದಾರೆ.
ಆಧಾರ್ ನಿರ್ವಹಣಾ ವ್ಯವಸ್ಥೆ ಸರಿ ಇಲ್ಲ ಎಂಬ ಆರೋಪಕ್ಕೆ ಉತ್ತರಿಸಿದ ಪಾಂಡ್ಯ, ಆಧಾರ್ ಇಲ್ಲ ಎಂಬ ಕಾರಣಕ್ಕೆ ಯಾರೂ ಸೌಲಭ್ಯ ವಂಚಿತರಾಗಬಾರದು. ಐದು ವರ್ಷಗಳಿಗೊಮ್ಮೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬದಲಾಯಿಸಲಾಗುತ್ತದೆ ಮತ್ತು ಪ್ರತಿ ವರ್ಷ ನಾವು 25 ಕೋಟಿ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ನವೀಕರಿಸುತ್ತಿದ್ದೇವೆ ವಿವರಿಸಿದ್ದಾರೆ.
ಪ್ರತಿ ಸಮಸ್ಯೆಯನ್ನು ಯುಐಡಿಎಐ ಪರಿಹರಿಸಲು ಸಾಧ್ಯವಿಲ್ಲ. ಒಂದು ವೇಳೆ ವ್ಯಕ್ತಿಯೊಬ್ಬರಿಗೆ ಬಯೋಮೆಟ್ರಿಕ್ ವಿವರಗಳು ಹೊಂದಾಣಿಕೆಯಾಗುತ್ತಿಲ್ಲ ಎಂಬ ಕಾರಣಕ್ಕೆ ಪಡಿತರ ನೀಡಲು ನಿರಾಕರಿಸಿದರೆ ನೀವು ಏನು ಮಾಡುತ್ತೀರಾ? ಎಂದು ನ್ಯಾಯಮೂರ್ತಿ ಎಕೆ ಸಿಕ್ರಿ ಅವರು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಪಾಂಡ್ಯ, ಇಂತಹ ಪ್ರಕರಣಗಳನ್ನು ಬೇರೆ ರೀತಿಯಲ್ಲಿ ನಿರ್ವಹಿಸುತ್ತೇವೆ. ಆ ವ್ಯಕ್ತಿ ಸೌಲಭ್ಯ ವಂಚಿತನಾಗಿದ್ದಾನೋ ಅಥವಾ ಆಧಾರ್ ಆಧಾರಿತ ಸೇವೆ ಸಿಗಲಿಲ್ಲವೋ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದಕ್ಕು ಮುನ್ನ, ದೇಶದ ಎಲ್ಲಾ ನಾಗರಿಕರ ಆಧಾರ್ ಮಾಹಿತಿಗಳು 13 ಅಡಿ ಎತ್ತರದ ಕಟ್ಟಡವೊಂದರ 5 ಅಡಿ ದಪ್ಪದ ಗೋಡೆಗಳ ನಡುವೆ ಸುರಕ್ಷಿತವಾಗಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


