ದೇಶ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ...

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನೋಟಿಸ್
ಮಲ್ಲಿಕಾರ್ಜುನ್ ಖರ್ಗೆ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ನೀಡುವಂತೆ ಶುಕ್ರವಾರ ನೋಟಿಸ್ ನೀಡಿದೆ.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅವಿಶ್ವಾಸ ನಿರ್ಣಯ ಪರಿಷ್ಕೃತ ಪಟ್ಟಿಯಲ್ಲಿ ಕಾಂಗ್ರೆಸ್‌ ನೋಟಿಸ್‌ ಅನ್ನೂ ಸೇರಿಸುವಂತೆ ಮನವಿ ಮಾಡಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ತಪ್ಪದೆ ಸಂಸತ್ತಿಗೆ ಹಾಜರಾಗುವಂತೆ ಸೂಚಿಸಿದೆ.
ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದ ತೆಲುಗುದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್‌ಆರ್ ಕಾಂಗ್ರೆಸ್‌ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್‌ ನೀಡಿವೆ. ಆದರೆ ಪ್ರತಿಪಕ್ಷಗಳ ಸದಸ್ಯರ ಗದ್ದಲದಿಂದಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ಲಭಿಸಿರಲಿಲ್ಲ. ಹೀಗಾಗಿ ಎರಡೂ ಪಕ್ಷಗಳು ಗುರುವಾರ ಮತ್ತೆ ತಕ್ಷಣವೇ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕು ಎಂದು ನೋಟಿಸ್ ನೀಡಿವೆ. ಆದರೆ, ಶುಕ್ರವಾರ ಕಲಾಪವನ್ನು ಮುಂದೂಡಲಾಗಿರುವುದರಿಂದ ಮಂಡನೆಗೆ ಅವಕಾಶ ದೊರೆತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.