ರಾಜ್ಯಸಭೆ ಚುನಾವಣೆ: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಮತದಾನ ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮತದಾನ ಆರಂಭವಾಗಿದ್ದು, ಆಯಾ ರಾಜ್ಯಗಳ ಜನಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜನರಿಂದ ನೇರವಾಗಿ ಆಯ್ಕೆಯಾಗಿರುವ ಶಾಸಕರು ಈ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಬಿಹಾರ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಗೆ ಹಾಲಿ ರಾಜ್ಯಸಭೆಯ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಕಾಂಗ್ರೆಸ್ ಪಕ್ಷಕ್ಕೆ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲೇ ಬೇಕಾದ ತವಕ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ಸೇರಿ ಒಟ್ಟು 7 ರಾಜ್ಯಗಳ 26 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ 5 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನಿಂದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಸ್ಪರ್ಧಿಸುತ್ತಿದ್ದರೆ ಜೆಡಿಎಸ್ ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ. ಬಿಜೆಪಿ ಒಂದು ಮತ್ತು ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಆರಾಮವಾಗಿ ರಾಜ್ಯಸಭೆಗೆ ಕಳುಹಿಸಬಹುದಾಗಿದ್ದು ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


