ದೇಶ

ರಾಜ್ಯಸಭೆ ಜಿದ್ದಾಜಿದ್ದಿ: 7 ರಾಜ್ಯಗಳ 26 ಸ್ಥಾನಗಳಿಗೆ ಇಂದು ಮತದಾನ

ತೀವ್ರ ಕುತೂಹಲ ಕೆರಳಿಸಿರುವ 26 ಸ್ಥಾನಗಳ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಹಾಲಿ ಚುನಾವಣೆ ಆಡಳಿತಾ ರೂಢ ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿ ಮಾರ್ಪಪಟ್ಟಿದೆ.

ರಾಜ್ಯಸಭೆ ಜಿದ್ದಾಜಿದ್ದಿ: 7 ರಾಜ್ಯಗಳ 26 ಸ್ಥಾನಗಳಿಗೆ ಇಂದು ಮತದಾನ
ಸಂಗ್ರಹ ಚಿತ್ರ
Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ 26 ಸ್ಥಾನಗಳ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಹಾಲಿ ಚುನಾವಣೆ ಆಡಳಿತಾ ರೂಢ ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿ ಮಾರ್ಪಪಟ್ಟಿದೆ.
ಈಗಾಗಲೇ ಬಿಹಾರ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಸೋತು ಸುಣ್ಣವಾಗಿುವ ಬಿಜೆಪಿಗೆ ಹಾಲಿ ರಾಜ್ಯಸಭೆಯ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಕಾಂಗ್ರೆಸ್ ಪಕ್ಷಕ್ಕೆ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲೇ ಬೇಕಾದ ತವಕ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ಸೇರಿ ಒಟ್ಟು 7 ರಾಜ್ಯಗಳ 26 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.
ಒಟ್ಟು 58 ರಾಜ್ಯಸಭಾ ಸ್ಥಾನಗಳ ಪೈಕಿ 10 ರಾಜ್ಯಗಳ 33 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಲಿದ್ದು, ಉಳಿದ 26 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಅಂತೆಯೇ ಮುಂದಿನ ತಿಂಗಳು ಒಟ್ಟು 17 ಬಿಜೆಪಿಯ ರಾಜ್ಯಸಭಾ ಸ್ಥಾನಗಳು ಮತ್ತು ಕಾಂಗ್ರೆಸ್ ಪಕ್ಷದಿಂದ 12 ಸ್ಥಾನಗಳು ಭರ್ತಿಯಾಗಲಿದ್ದು, ಈ ಹಿಂದೆ ರಾಜ್ಯಸಭೆಗೆ ನಾಮನಿರ್ದೇಶನವಾಗಿದ್ದ ನಟಿ ರೇಖಾ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಸಾಮಾಜಿಕ ಕಾರ್ಯಕರ್ತೆ ಅನು ಅಗಾ ಅವರು ಏಪ್ರಿಲ್ ನಲ್ಲಿ ನಿವೃತ್ತರಾಗಲಿದ್ದಾರೆ.
ಇನ್ನು ಒಟ್ಟು 245 ಸ್ಥಾನಗಳ ರಾಜ್ಯಸಭೆಯಲ್ಲಿ ಎನ್ ಡಿಎ ಮೈತ್ರಿಕೂಟ 76 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 54 ಸ್ಥಾನಗಳನ್ನು ಹೊಂದಿದೆ. ಅಂತೆಯೇ ಎಸ್ ಪಿ 18, ಎಐಎಡಿಎಂಕೆ 13, ಟಿಎಂಸಿ 12, ಇತರರು 65 ಸ್ಥಾನ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.