ದೇಶ

ಸೋನಿಯಾ ಗಾಂಧಿಗೆ ಮತ್ತೆ ಅನಾರೋಗ್ಯ, ಶಿಮ್ಲಾದಿಂದ ದೆಹಲಿಗೆ ವಾಪಸ್

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾಗಾಂಧಿ ಅವರು ಶುಕ್ರವಾರ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಶಿಮ್ಲಾದಿಂದ ದೆಹಲಿಗೆ ವಾಪಸ್ ಆಗಿದ್ದಾರೆ.

ಸೋನಿಯಾ ಗಾಂಧಿಗೆ ಮತ್ತೆ ಅನಾರೋಗ್ಯ, ಶಿಮ್ಲಾದಿಂದ ದೆಹಲಿಗೆ ವಾಪಸ್
ಸಂಗ್ರಹ ಚಿತ್ರ
Published On :
ಶಿಮ್ಲಾ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾಗಾಂಧಿ ಅವರು ಶುಕ್ರವಾರ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಶಿಮ್ಲಾದಿಂದ ದೆಹಲಿಗೆ ವಾಪಸ್ ಆಗಿದ್ದಾರೆ.
ಮೂಲಗಳ ಪ್ರಕಾರ ತಮ್ಮ ಪುತ್ರಿ ಪ್ರಿಯಾಂಕಾ ವಾದ್ರಾ ಅವರೊಂದಿಗೆ ಶಿಮ್ಲಾಗೆ ತೆರಳಿದ್ದ ಸೋನಿಯಾ ಗಾಂಧಿ ಅವರು ಕಳೆದ ರಾತ್ರಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೂಡಲೇ ಅವರನ್ನು ದೆಹಲಿಗೆ ವಾಪಸ್ ಕರೆತರಲಾಗಿದೆ. ಕೌಟುಂಬಿಕ ಕೆಲಸದ ನಿಮಿತ್ತ ಸೋನಿಯಾಗಾಂಧಿ ತಮ್ಮ ಪುತ್ರಿಯೊಂದಿಗೆ ಶಿಮ್ಲಾಗೆ ತೆರಳಿದ್ದು, ಈ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೂಡಲೇ ಅವರನ್ನುಶಿಮ್ಲಾದಿಂದ ಚಂಡೀಘಡಕ್ಕೆ, ಚಂಡೀಘಡದಿಂದ ದೆಹಲಿಗೆ ರಸ್ತೆ ಮಾರ್ಗದ ಮೂಲಕ ಕರೆತರಲಾಗಿದೆ ಎಂದು ತಿಳಿದುಬಂದಿದೆ.
ಶಿಮ್ಲಾದ ಇಂದಿರಾಗಾಂಧಿ ಆಸ್ಪತ್ರೆಯಲ್ಲೇ ಕುಟುಂಬಸ್ಥರು ಚಿಕಿತ್ಸೆ ಕೊಡಿಸಲು ಮುಂದಾಗಿದ್ದರೂ, ಸೋನಿಯಾ ಅವರು ಅಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು, ಹೀಗಾಗಿ ಅನಿವಾರ್ಯವಾಗಿ ಇದೀಗ ಅವರನ್ನು ದೆಹಲಿಕೆ ಕರಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಸೋನಿಯಾಗಾಂಧಿ ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದು, ಅವರನ್ನು ಇದೀಗ ದೆಹಲಿಗೆ ವಾಪಸ್ ಕರೆತರಲಾಗಿದೆ.  
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಐಜಿಎಂಸಿ ಆಸ್ಪತ್ರೆ ಮುಖ್ಯಸ್ಥ ಡಾ.ರಮೇಶ್ ಚಾಂದ್ ಅವರು, ಪ್ರಸ್ತುತ ಸೋನಿಯಾಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ದೆಹಲಿಗೆ ವಾಪಸ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿಂದೆಯೂ ಕೂಡ ಅನಾರೋಗ್ಯಕ್ಕೆ ತುತ್ತಾಗಿದ್ದ ಸೋನಿಯಾ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ವಾಪಸ್ ಆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.