445 ಕೋಟಿ ರು. ವಂಚನೆ: ಐಡಿಬಿಐ ಮಾಜಿ ಜನರಲ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಿಸಿದ ಸಿಬಿಐ
ದಿನಕ್ಕೊಂದು ಬ್ಯಾಂಕ್ ವಂಚನೆ ಪ್ರಕರಣಗಳು ಬಯಲಿಗೆ ಬರುತ್ತಿದ್ದು, ಐಡಿಬಿಐ ಬ್ಯಾಂಕ್ ಗೆ 445 ಕೋಟಿ ರುಪಾಯಿ...

Published On :
ನವದೆಹಲಿ: ದಿನಕ್ಕೊಂದು ಬ್ಯಾಂಕ್ ವಂಚನೆ ಪ್ರಕರಣ ಬಯಲಿಗೆ ಬರುತ್ತಿದ್ದು, ಐಡಿಬಿಐ ಬ್ಯಾಂಕ್ ಗೆ 445 ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಮಾಜಿ ಜನರಲ್ ಮ್ಯಾನೇಜರ್ ಹಾಗೂ ಇತರೆ 30 ಮಂದಿ ವಿರುದ್ಧ ಸಿಬಿಐ ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದೆ.
ನಕಲಿ ದಾಖಲೆಗಳ ಆಧಾರದ ಮೇಲೆ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಪಡೆಯುವ ಮೂಲಕ ಮತ್ತು ಮೀನುಗಾರಿಕೆ ಸಾಲಗಳನ್ನು ಪಡೆಯುವ ಮೂಲಕ ಬ್ಯಾಂಕ್ 32 ಕೋಟಿ ರುಪಾಯಿ ವಂಚಿಸಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ದಾಖಲೆಗಳ ಆಧಾರದ ಮೇಲೆ 192 ಕೋಟಿ ರುಪಾಯಿ ಸಾಲ ಪಡೆಯಲಾಗಿದೆ ಎಂದು ಸಿಬಿಐ ಆರೋಪಿಸಿದೆ.
ನಕಲಿ ದಾಖಲೆ ಮತ್ತು ಭದ್ರತೆ ನೀಡಿ ಮಾಜಿ ಜನರಲ್ ಮ್ಯಾನೇಜರ್ ಬಟ್ಟು ರಾಮ್ ರಾವ್ ಅವರೊಂದಿಗೆ ಸೇರಿ 21 ಸಮೂಹ ಸಂಸ್ಥೆಗಳು 2009-2010, 2010-11 ಮತ್ತು 2011-2012ರಲ್ಲಿ ಒಟ್ಟು 98 ಕೋಟಿ ರುಪಾಯಿ ಸಾಲ ಪಡೆಯಲಾಗಿದೆ ಎಂದು ಸಿಬಿಐ ದೂರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


