ಫೇಸ್ಬುಕ್ ದತ್ತಾಂಶ ದುರ್ಬಳಕೆ ಆರೋಪ: ಕೇಂಬ್ರಿಜ್ ಅನಾಲಿಟಿಕಾ ಕಂಪನಿಗೆ ಕೇಂದ್ರ ನೋಟಿಸ್
ಬಳಕೆದಾರರು ವೈಯಕ್ತಿಕ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ ಕೇಂಬ್ರಿಜ್ ಅನಾಲಿಟಿಕಾ ಕಂಪನಿಗೆ ಕೇಂದ್ರ ಸರ್ಕಾರ ಶುಕ್ರವಾರ ನೋಟಿಸ್ ನೀಡಿದೆ...

Published On :
ನವದೆಹಲಿ; ಬಳಕೆದಾರರು ವೈಯಕ್ತಿಕ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ ಕೇಂಬ್ರಿಜ್ ಅನಾಲಿಟಿಕಾ ಕಂಪನಿಗೆ ಕೇಂದ್ರ ಸರ್ಕಾರ ಶುಕ್ರವಾರ ನೋಟಿಸ್ ನೀಡಿದೆ.
ತಾಂತ್ರಿಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಕೇಂಬ್ರಿಜ್ ಅನಾಲಿಟಿಕಾಗೆ ನೋಟಿಸ್ ಜಾರಿ ಮಾಡಿದ್ದು, ಭಾರತದ ಬಳಕೆದಾರರ ದತ್ತಾಂಶ ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಬಗ್ಗೆ ಮಾಹಿತಿ ನೀಡಲು ನೋಟಿಸ್ ನಲ್ಲಿ ಸೂಚಿಸಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಾ.31ರ ಒಳಗೆ ಉತ್ತರಿಸಲು ಕೇಂಜ್ರಿಜ್ ಅನಾಲಿಟಿಕಾ ಕಂಪನಿಗೆ ತಿಳಿಸಿದೆ. ಭಾರತದಲ್ಲಿನ ಬಳಕೆದಾರರ ಮಾಹಿತಿ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದೀರಾ? ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದೀರಾ ಎಂದು ಕೇಂದ್ರ ಪ್ರಶ್ನಿಸಿದೆ.
ಕೆಲ ದಿನಗಳ ಹಿಂದಷ್ಟೇ ಕೇಂಬ್ರಿಜ್ ಅನಾಲಿಟಿಕಾಗೆ ಎಚ್ಚರಿಕೆ ನೀಡಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು, ಭಾರತೀಯ ಚುನಾವಣೆ ಪ್ರಕ್ರಿಯೆ ಮೇಲೆ ಯಾವುದೇ ರೀತಿಯ ಅನಪೇಕ್ಷಿತ ಪ್ರಭಾವ ಬೀರುವ ಘಟನೆಗಳು ಕಾಣಿಸಿದರೆ ಫೇಸ್'ಬುಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಕೇಂದ್ರ ಸರ್ಕಾರnoticeನೋಟಿಸ್Centre governmentCambridge AnalyticaFacebook dataಫೇಸ್ಬುಕ್ ದತ್ತಾಂಶಕೇಂಜ್ರಿಬ್ ಅನಾಲಿಟಿಕಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


