ದೇಶ

ಜಮ್ಮು-ಕಾಶ್ಮೀರ; ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್- 2 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ; ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್- 2 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :
ಅನಂತ್ ನಾಗ್; ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಅನಂತ್ ನಾಗ್ ಜಿಲ್ಲೆಯ ಶಿಸ್ತಾರ್ಗಾಮ್ ನ ದೂರು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆಯಿಂದಲೇ ಭಾರತೀಯ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡಿದಿದೆ. 
ಇದರಂತೆ ಇಂದೂ ಬೆಳಿಗ್ಗೆಯವರೆಗೂ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಭದ್ರತಾ ಪಡೆಗಳು ಇಬ್ಬರು ಉಗ್ರನ್ನು ಸದೆಬಡಿದಿದೆ ಎಂದು ತಿಳಿದುಬಂದಿದೆ. 
ಪ್ರಸ್ತುತ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಸೇನಾಪಡೆ ವಶಕ್ಕೆ ಪಡೆದುಕೊಂದಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ. 
ಉಗ್ರರು ಯಾವ ಸಂಘಟನೆಗೆ ಸೇರಿದವರೆಂದು ಈವರೆಗೂ ತಿಳಿದುಬಂದಿಲ್ಲ. ಕಾರ್ಯಾಚರಣೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.