ದೇಶ

ಜೆಎನ್ ಯು ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಕಿರುಕುಳ: ದೂರು ದಾಖಲು

ಜವಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯ ಪ್ರತಿಭಟನೆ ವೇಳೆ ನನ್ನ ಮೇಲೆ ಪೊಲೀಸರಿಂದ ಕಿರುಕುಳ ನೀಡಲಾಗಿತ್ತು ಎಂದು ಮಹಿಳಾ ಪತ್ರಕರ್ತೆಯೊಬ್ಬರು ದೂರು ...

ಜೆಎನ್ ಯು ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ  ಕಿರುಕುಳ: ದೂರು ದಾಖಲು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯ ಪ್ರತಿಭಟನೆ ವೇಳೆ ನನ್ನ ಮೇಲೆ ಪೊಲೀಸರಿಂದ ಕಿರುಕುಳ ನೀಡಲಾಗಿತ್ತು ಎಂದು  ಮಹಿಳಾ ಪತ್ರಕರ್ತೆಯೊಬ್ಬರು ದೂರು ದಾಖಲಿಸಿದ್ದಾರೆ.
ಈ ಸಂಬಂಧ ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ವಿಚಕ್ಷಣಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿಭಟನೆ ವೇಳೆ ಮಹಿಳಾ ಫೋಟೋ ಗ್ರಾಫರ್  ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು, ನನ್ನ ಕ್ಯಾಮೆರಾವನ್ನು ತೆಗೆದುಕೊಂಡ ಅವರು ಅದನ್ನು ವಾಪಸ್ ನೀಡಿಲ್ಲ, ನಾನು ಮಾಧ್ಯಮದವರೆಂದು ಹೇಳಿದರೂ ಅದನ್ನು ಕೇಳದ ಅವರು,  ನನ್ನನ್ನು ಎಳೆದಾಡಿದರು ಎಂದು ಮಹಿಳಾ ಪತ್ರಕರ್ತೆ ದೂರಿದ್ದಾರೆ.
ತನಿಖೆ ಆರಂಭವಾಗಿದ್ದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ,  ಜೆಎನ್ ಯು ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿಗಳು ಪ್ರೊ.ಅತುಲ್ ಜೋಹ್ರಿ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.