ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೆಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿ..........

Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯವುಸೋಮವಾರ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ತನಿಖಾ ದಳವು ಹೆಚ್ಚುವರಿ ತನಿಖೆಗಾಗಿ ಮುಖರ್ಜಿಯಾ ಅವರನ್ನು ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.
ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಸಹಾಯ ಪಡೆದು ಐಎನ್ಎಕ್ಸ್ ಮಿಡಿಯಾ ಮಾಲೀಕರಾದ ಮುಖರ್ಜಿಯಾ ಫಾರಿನ್ ಇನ್ವೆಸ್ಟ್ಮೆಂಟ್ ಪ್ರೋಮೋಷನ್ ಬೋರ್ಡ್ (ಎಫ್ಐಪಿಬಿ) ಅನುಮೋದನೆಯನ್ನು ಪಡೆಯಲು ಲಂಚ ನೀಡಿದ್ದರು.
ಅದಾಗ್ಯೂ ಮಾರ್ಚ್ 23 ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ತಿ ಚಿದಂಬರಂ ಅವರಿಗೆ 10 ಲಕ್ಷ ರೂ ಮುಚ್ಚಳಿಕೆ ಪತ್ರದ ಆಧಾರದ ಮೇಲೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


