ಚುನಾವಣಾ ದಿನಾಂಕ ಸೋರಿಕೆ: ಬಿಜೆಪಿ 'ಸೂಪರ್ ಎಲೆಕ್ಷನ್ ಕಮಿಷನ್' ಆಗಿದೆ- ಕಾಂಗ್ರೆಸ್
ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಅವರು...

Published On :
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಅವರು ಘೋಷಣೆ ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಚುನಾವಣಾ ಆಯೋಗ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಕರ್ನಾಟಕ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಬಿಜೆಪಿ ಸೂಪರ್ ಎಲೆಕ್ಷನ್ ಕಮಿಷನ್ ಆಗಿ ಹೋಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತಂತೆ ಮಾತನಾಡಿರುವ ಅವರು, ಈ ಕುರಿತು ಚುನಾವಣಾ ಆಯೋಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನೋಟಿಸ್ ಜಾರಿ ಮಾಡುವುದೇ?... ಚುನಾವಣಾ ಆಯೋಗ ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದಕ್ಕೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ದ ಎಫ್ಐಆರ್ ದಾಖಲಿಸುವುದೇ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್TweetKarnatakaಕರ್ನಾಟಕಟ್ವೀಟ್Election Commissionಚುನಾವಣಾ ಆಯೋಗಕರ್ನಾಟಕ ವಿಧಾನಸಭಾ ಚುನಾವಣೆKarnataka assembly pollAmit Malviyaಅಮಿತ್ ಮಾಳ್ವಿಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


