ಕರ್ನಾಟಕದಲ್ಲಿನ ನಮ್ಮ ಪ್ರಚಾರಕ್ಕೆ ಅಮಿತ್ ಶಾ ದೊಡ್ಡ ಗಿಪ್ಟ್ ನೀಡಿದ್ದಾರೆ - ರಾಹುಲ್ ಗಾಂಧಿ
ಕರ್ನಾಟಕ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಭ್ರಷ್ಟ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ದೊಡ್ಡ ಗಿಪ್ಟ್ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಕರ್ನಾಟಕ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಭ್ರಷ್ಟ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ದೊಡ್ಡ ಗಿಪ್ಟ್ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಅಮಿತ್ ಶಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯಡಿಯೂರಪ್ಪ ಸರ್ಕಾರ ಭ್ರಷ್ಟಾ ಸರ್ಕಾರವಾಗಿತ್ತು ಎಂಬುದನ್ನು ಅಮಿತ್ ಒಪ್ಪಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಬಿಜೆಪಿ ಸಾಮಾಜಿಕ ಜಾಲತಾಣದ ಘಟಕದ ಮುಖ್ಯಸ್ಥ ಅಮಿತ್ ಮಾಳವಿಯಾ ಮಾಡಿದ್ದ ಟ್ವೀಟ್ ಕೂಡಾ ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು.
ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಕ್ವೀ, ಟಿವಿ ಚಾನೆಲ್ ಗಳ ಸುದ್ದಿಯ ಆಧಾರದ ಮೇಲೆ ಅಮಿತ್ ಮಾಳವಿಯಾ ಆ ರೀತಿಯ ಟ್ವಿಟ್ ಮಾಡಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಮುಖಂಡರೂ ಕೂಡಾ ಆದೇ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಮುಂದೆ ಹಾಗೆ ಆಗದಂತೆ ಮಾಳವಿಯಾ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮುಖ್ಯಸ್ಥ ಒ. ಪಿ. ರಾವತ್ , ದಿನಾಂಕವನ್ನು ಪ್ರಕಟಿಸಿಲ್ಲದಿರುವಾಗಲೇ ಅಮಿತ್ ಮಾಳವಿಯಾ ಮತಎಣಿಕೆ ದಿನವನ್ನು ತಪ್ಪಾಗಿ ಟ್ವಿಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


