ದೇಶ

ಮಾಳವಿಯಾ ಟ್ವೀಟ್ : ಮಾಹಿತಿ ಸೋರಿಕೆ ತಡೆಗಟ್ಟುವಂತೆ ಖರ್ಗೆ ಚುನಾವಣಾ ಆಯೋಗಕ್ಕೆ ಆಗ್ರಹ

ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.

ಮಾಳವಿಯಾ ಟ್ವೀಟ್ : ಮಾಹಿತಿ ಸೋರಿಕೆ ತಡೆಗಟ್ಟುವಂತೆ ಖರ್ಗೆ ಚುನಾವಣಾ ಆಯೋಗಕ್ಕೆ ಆಗ್ರಹ
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ :  ಕರ್ನಾಟಕ ವಿಧಾನಸಭಾ ಚುನಾಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.

 ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ಸೋರಿಕೆ ಮಾಡದಂತೆ ಚುನಾವಣಾ ಆಯೋಗವನ್ನು ಅವರು ಆಗ್ರಹಿಸಿದ್ದಾರೆ.

 ಈ ಮಧ್ಯೆ  ಸಂವಿಧಾನಿಕ ಸಂಸ್ಥೆಯನ್ನು ಬಿಜೆಪಿ ಕಡೆಗಣಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪಮೊಯ್ಲಿ ಆರೋಪಿಸಿದ್ದಾರೆ.

ಬಿಜೆಪಿ ಚುನಾವಣಾ ಕಚೇರಿಯನ್ನು ಕಡೆಗಣಿಸಬಾರದು ಎಂದು ಅವರು ಒತ್ತಾಯಿಸಿದ್ದು, ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಬಿಜೆಪಿ ವಿರುದ್ಧ ಬಹುಮತದಿಂದ ಗೆಲುವು ಸಾಧಿಸುತ್ತೇವೆ. ಸಮಾಜದಲ್ಲಿನ ದುರ್ಬಲ ವರ್ಗ ಯಾವಾಗಲೂ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಅವರು ಹೇಳಿದ್ದಾರೆ.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.