ದೇಶ

ಸ್ಟುಡಿಯೋ ಒಳಗೆ ರೇಡಿಯೋ ಜಾಕಿ ಬರ್ಬರ ಹತ್ಯೆ

ರೇಡಿಯೋ ಜಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ....

ಸ್ಟುಡಿಯೋ ಒಳಗೆ ರೇಡಿಯೋ ಜಾಕಿ ಬರ್ಬರ ಹತ್ಯೆ
ರೇಡಿಯೋ ಜಾಕಿ
Published On :
ತಿರುವನಂತಪುರ: ರೇಡಿಯೋ ಜಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
36 ವರ್ಷದ ರಾಜೇಶ್ ಕೊಲೆಯಾದ ರೇಡಿಯೋ ಜಾಕಿ. ಅವರು ರೆಡ್ ಎಫ್.ಎಂ. ಮೂಲಕ ಜನಪ್ರಿಯರಾಗಿದ್ದರು.ತಮ್ಮ ಸ್ನೇಹಿತನ ಜೊತೆ ರೇಡಿಯೋ ಸ್ಚೇಷನ್ ನಲ್ಲಿ ಕುಳಿತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. 
ರಾಜೇಶ್ ಮತ್ತು ಆತನ ಸ್ನೇಹಿತ ಯಾವುದೋ ಕಾರ್ಯಕ್ರಮ ಮುಗಿಸಿ ವಾಪಸ್ ಸ್ಟುಡಿಯೋ ಗೆ ಬಂದಿದ್ದರು.ಕೆಂಪು ಬಣ್ಣದ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಂದ ಅಪರಿಚಿತರು,ಹರಿತವಾದ ಆಯುಧಗಳಿಂದ ಇರಿದಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ರಾಜೇಶ್ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.