ದೇಶ

ಛತ್ತೀಸಗಢ: ಬಿಜೆಪಿ ನಾಯಕನನ್ನು ಹತ್ಯೆಗೈದ ಶಂಕಿತ ಮಾವೋವಾದಿಗಳು!

ಬಿಜೆಪಿ ಸರ್ಕಾರವಿರುವ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಬಸ್ತಾರ್ ನಲ್ಲಿ ಶಂಕಿತ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ...

ಛತ್ತೀಸಗಢ: ಬಿಜೆಪಿ ನಾಯಕನನ್ನು ಹತ್ಯೆಗೈದ ಶಂಕಿತ ಮಾವೋವಾದಿಗಳು!
ಬಿಜೆಪಿ
Published On :
ರಾಯಪುರ್: ಬಿಜೆಪಿ ಸರ್ಕಾರವಿರುವ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಬಸ್ತಾರ್ ನಲ್ಲಿ ಶಂಕಿತ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. 
ಬಿಜೆಪಿ ಯೂತ್ ಲೀಡರ್ ಜಗದೀಶ್ ಕೊಂದ್ರಾ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಚೂಪಾದ ಕತ್ತಿಗಳಿಂದ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಗದೀಶ್ ರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. 
ಮಾವೋವಾದಿಗಳು ಈ ದುಷ್ಕೃತ್ಯ ಎಸಗಿರಬಹುದು ಎಂದು ಬಿಜಾಪುರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿವ್ಯಾಂಗ್ ಪಟೇಲ್ ತಿಳಿಸಿದ್ದಾರೆ. 
ಆರೋಪಿಗಳ ಪತ್ತೆಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಘಟನೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.