ಏರ್ ವಿಸ್ತಾರ ವಿಮಾನದ ಗಗನಸಖಿಗೆ ಲೈಂಗಿಕ ಕಿರುಕುಳ: ಉದ್ಯಮಿ ಬಂಧನ
ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ 62 ವರ್ಷದ ಪುಣೆಯ ಉದ್ಯಮಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ...

Published On :
ನವದೆಹಲಿ: ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ 62 ವರ್ಷದ ಪುಣೆಯ ಉದ್ಯಮಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಏರ್ ವಿಸ್ತಾರ ವಿಮಾನದ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉದ್ಯಮಿ ರಾಜೀವ್ ವಸಂತ್ ದಾನಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರಂದು ಲಖನೌ-ದೆಹಲಿ ನಡುವೆ ಸಂಚರಿಸುವ ಏರ್ ವಿಸ್ತಾರ ಸಂಸ್ಥೆಯ ವಿಮಾನದಲ್ಲಿ ಈ ಘಟನೆ ನಡೆದಿದೆ. ದೆಹಲಿಯ ಟಿ3 ಟರ್ಮಿನಲ್ ನಲ್ಲಿ ವಿಮಾನದಿಂದ ಇಳಿಯುತ್ತಿರುವಾಗ ರಾಜೀವ್ ಗಗನಸಖಿಯೊಬ್ಬರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ.
ಈ ಕುರಿತು ಗಗನಸಖಿ ನೀಡಿದ ದೂರಿನ ಅನ್ವಯ ವಿಮಾನ ನಿಲ್ದಾಣದಲ್ಲೇ ರಾಜೀವ್ ವಸಂತ್ ದಾನಿಯನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arrestಲೈಂಗಿಕ ಕಿರುಕುಳಬಂಧನBusinessmanಉದ್ಯಮಿಗಗನಸಖಿDelhi airportmolestingದೆಹಲಿ ವಿಮಾನ ನಿಲ್ದಾಣHostessVistara Airವಿಸ್ತಾರ ಏರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


