ದೇಶ

ಸಿಬಿಎಸ್'ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲು ಬಿಡುವುದಿಲ್ಲ- ಕೇಂದ್ರ

ಸಿಬಿಎಸ್'ಇ 10 ಮತ್ತು 12ನೇ ತರಗತಿಯ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ...

ಸಿಬಿಎಸ್'ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲು ಬಿಡುವುದಿಲ್ಲ- ಕೇಂದ್ರ
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್
Published On :
ನವದೆಹಲಿ: ಸಿಬಿಎಸ್'ಇ 10 ಮತ್ತು 12ನೇ ತರಗತಿಯ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. 
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತಂತೆ ರಾಜಧಾನಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು, ಇದು ನಿಜಕ್ಕೂ ದುರಾದೃಷ್ಟಕರವಾದ ಬೆಳವಣಿಗೆಯಾಗಿದೆ. ಪ್ರಶ್ನೆಪತ್ರಿಕೆಯನ್ನು ಯಾರೇ ಸೋರಿಕೆ ಮಾಡಿದರೂ ಸುಮ್ಮನೆ ಬಿಡುವುದಿಲ್ಲ ಶೀಘ್ರಗತಿಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಲಿದ್ದಾರೆ. ಇಂತಹ ಘಟನೆಗಳಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಎಸ್ಎಸ್'ಸಿ ಪರೀಕ್ಷೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರಿಗಾಗಿರುವ ಶಿಕ್ಷೆಯಂತೆಯೇ, ಪ್ರಸ್ತುತ ಪ್ರಕರಣದಲ್ಲಿನ ಆರೋಪಿಗಳ ವಿರುದ್ಧವೂ ಕಠಿಣ ಶಿಕ್ಷೆ ಕೈಗೊಳ್ಳಲಾಗುತ್ತದೆ. ಈಗಾಗಲೇ ಆಂತರಿಕ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ 2 ಎಫ್ಐಆರ್ ದಾಖಲಾಗಿವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ವಿದ್ಯಾರ್ಥಿಗಳ ಪೋಷಕರ ಕುರಿತು ಸಹಾನುಭೂತಿ ತೋರಿಸಿರುವ ಅವರು, ಪೋಷಕರ ನೋವು ಹಾಗೂ ವಿದ್ಯಾರ್ಥಿಗಳ ಆಕ್ರೋಶ ನನಗೆ ಅರ್ಥವಾಗುತ್ತದೆ. ನನಗೂ ಕೂಡ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ನಾನು ಕೂಡ ಮಕ್ಕಳ ಪೋಷಕನಾಗಿದ್ದೇನೆಂದಿದ್ದಾರೆ. 
ಇದೇ ವೇಳೆ ಸಿಬಿಎಸ್'ಸಿಯನ್ನು ಸಮರ್ಥಿಸಿಕೊಂಡಿರುವ ಅವರು, ಈ ಹಿಂದಿನ ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ನಡೆಸಿದ ವಿಧಾನದಿಂದ ಮಂಡಳಿ ಉತ್ತಮ ಹೆಸರನ್ನು ಪಡೆದುಕೊಂಡಿದೆ. ಪರೀಕ್ಷೆಗಳನ್ನು ನಡೆಸುವುದರಲ್ಲಿ ಸಿಬಿಎಸ್'ಸಿ ಉತ್ತಮ ವ್ಯವಸ್ಥೆಯನ್ನು ಹೊಂದಿದೆ. ಸುಪ್ರೀಂಕೋರ್ಟ್ ಕೂಡ ಇದೇ ಮಂಡಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸುವ ಜವಾಬ್ದಾರಿಯನ್ನು ನೀಡಿದೆ ಎಂದು ಹೇಳಿದ್ದಾರೆ. 
ಈ ನಡುವೆ ದೆಹಲಿ ಪೊಲೀಸರಿಗೆ ದೂರು ನೀಡಿಸುವ ಸಿಬಿಎಸ್'ಸಿ ಹೇಳಿಕೆಯನ್ನು ದಾಖಲಿಸಿದ್ದು, ಹೇಳಿಕೆಯಲ್ಲಿ ವ್ಯಕ್ತಿಯೊಬ್ಬನ ಹೆಸರನ್ನು ಹೇಳಿದೆ ಎಂದು ತಿಳಿದುಬಂದಿದೆ. ದೆಹಲಿಯ ರಾಜಿಂದರ್ ನಗರದಲ್ಲಿ ಟುಟೋರಿಯಲ್ ನಡೆಸುತ್ತಿರುವ ವ್ಯಕ್ತಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದಾರೆಂದು ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.