ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ: ಸಿಎಂ ಫಡ್ನವೀಸ್ ಭಾಷಣ ವೇಳೆ ಶೂ ಎಸೆತ ಕಿಡಿಗೇಡಿಗಳು
ಲೋಕಪಾಲ ಮಸೂದೆ ಮತ್ತು ರಾಜ್ಯಗಳಲ್ಲಿ ಲೋಕಾಯುಕ್ತವನ್ನು ಶೀಘ್ರದಲ್ಲಿಯೇ ನೇಮಕ ಮಾಡುವಂತೆ ಆಗ್ರಹಿಸಿ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ನಡೆಸುತ್ತಿದ್ದ...

Published On :
ನವದೆಹಲಿ: ಲೋಕಪಾಲ ಮಸೂದೆ ಮತ್ತು ರಾಜ್ಯಗಳಲ್ಲಿ ಲೋಕಾಯುಕ್ತವನ್ನು ಶೀಘ್ರದಲ್ಲಿಯೇ ನೇಮಕ ಮಾಡುವಂತೆ ಆಗ್ರಹಿಸಿ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವೇಳೆ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಮೇಲೆ ಕಿಡಿಗೇಡಿಗಳು ಶೂ ಎಸೆದಿರುವ ಘಟನೆ ನಡೆದಿದೆ.
ರಾಮಲೀಲಾ ಮೈದಾನದಲ್ಲಿ ಅನಿರ್ದಿಷ್ಟಾವಧಿ ನಿರಶನಕ್ಕೆ ಕುಳಿತಿದ್ದ ಅಣ್ಣಾ ಹಜಾರೆ ಅವರ ಮನವೊಲಿಸುವಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಮಂತ್ರಿ ಗಜೇಂದ್ರ ಸಿಂಗ್ ಶೇಖಾವತ್ ಅವರು ಯಶಸ್ವಿಯಾದರು, ಎಳನೀರು ಕುಡಿಸಿ ಅಣ್ಣಾ ಹಜಾರೆಯವರ ಉಪವಾಸವನ್ನು ಅಂತ್ಯಗೊಳಿಸಿದ್ದರು.
ಆದರೆ, ಈ ವೇಳೆ ಮೂವರು ನಾಯಕರು ಇದ್ದ ವೇದಿಕೆ ಮೇಲೆ ವ್ಯಕ್ತಿಯೋರ್ವ ಶೂ ಎಸೆದಿದ್ದಾನೆ. ಯಾರನ್ನು ಗುರಿಯಾಗಿಸಿ ಶಊ ಎಸೆದ ಎಂಬುದು ಈ ವರೆಗೂ ಸ್ಪಷ್ಟವಾಗಿಲ್ಲ. ಶೂ ಎಸೆದ ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Devendra Fadnavisದೇವೇಂದ್ರ ಫಡ್ನವೀಸ್ದೆಹಲಿDelhiAnna Hazareಅಣ್ಣಾ ಹಜಾರೆಉಪವಾಸ ಸತ್ಯಾಗ್ರಹಶೂ ಎಸೆತHungerf strikeShoe hurld
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


