ದೇಶ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿ ಪೊಲೀಸರಿಂದ 30 ಮಂದಿಯ ವಿಚಾರಣೆ, ಮುಂದುವರೆದ ಪ್ರತಿಭಟನೆ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 30 ಮಂದಿಯ ವಿಚಾರಣೆ ನಡೆಸಿದ್ದಾರೆ.

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿ ಪೊಲೀಸರಿಂದ 30 ಮಂದಿಯ ವಿಚಾರಣೆ, ಮುಂದುವರೆದ ಪ್ರತಿಭಟನೆ
ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿ ಪೊಲೀಸರಿಂದ 30 ಮಂದಿಯ ವಿಚಾರಣೆ, ಮುಂದುವರೆದ ಪ್ರತಿಭಟನೆ
Published On :
ನವದೆಹಲಿ: ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 30 ಮಂದಿಯ ವಿಚಾರಣೆ ನಡೆಸಿದ್ದಾರೆ. 
ಮಾ.30 ರಂದು ಪೊಲೀಸರು 30 ಮಂದಿಯ ವಿಚಾರಣೆ ನಡೆಸಿದ್ದು, ವಿಚಾರಣೆಗೊಳಗಾದ ವ್ಯಕ್ತಿಗಳಿಂದ 12 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ದೆಹಲಿ ಪೊಲೀಸರು ಖಾಸಗಿ ಕೋಚಿಂಗ್ ಕೇಂದ್ರದ ಪ್ರಾಧ್ಯಾಪಕರೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. 
12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ 10 ನೇ ತರಗತಿಯ ಗಣಿತಶಾಸ್ತ್ರದ ವಿಷಯದ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಎಸ್ಇ ಈ ಪ್ರಾಧ್ಯಾಪಕರ ವಿರುದ್ಧ ಆರೋಪ ಮಾಡಿತ್ತು. 
ಇತ್ತ ಸಿಬಿಎಸ್ಇ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ನಿವಾಸದ ಬಳಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.