ಅಪರಾಧಿಗಳಿಗೆ ಮಾನವ ಹಕ್ಕು ಇಲ್ಲ: ಮಧ್ಯ ಪ್ರದೇಶ ಸಿಎಂ ಚೌಹಾಣ್
ಅಪರಾಧಿಗಳನ್ನು ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡುತ್ತಿರುವ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಧ್ಯ ಪ್ರದೇಶ....

Published On :
ಭೋಪಾಲ್: ಅಪರಾಧಿಗಳನ್ನು ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡುತ್ತಿರುವ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಸಮಾಜ ವಿರೋಧಿ ಶಕ್ತಿಗಳಿಗೆ ಮಾನವ ಹಕ್ಕು ಇಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಮಹಿಳಾ ಸುರಕ್ಷತೆ ಮತ್ತು ಭದ್ರತೆ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಮಧ್ಯ ಪ್ರದೇಶ ಸಿಎಂ, ತಮ್ಮ ಸರ್ಕಾರ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಮಹಿಳೆಯರ ಭದ್ರತೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಿದೆ. ನಮ್ಮ ಹೆಣ್ಣು ಮಕ್ಕಳಿಗೆ ಕೀಟಲೆ ಮಾಡುವವರಿಗೆ ಮಾನವ ಹಕ್ಕು ಅನ್ವಯಿಸುವುದಿಲ್ಲ ಎಂದಿದ್ದಾರೆ.
ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಲ್ಲಾ ಅಧಿಕಾರ ಪೊಲೀಸರಿಗೆ ಇದೆ ಎಂದು ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


