ದೇಶ

ಬಿಹಾರ, ಪಶ್ಚಿಮ ಬಂಗಾಳದಲ್ಲಿ ಕೋಮು ಗಲಭೆ: ತನಿಖೆಗೆ ನಾಲ್ವರು ಸದಸ್ಯರ ತಂಡ ರಚಿಸಿದ ಅಮಿತ್ ಶಾ

ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಉಂಟಾಗಿದ್ದ ಗಲಭೆ ಸಂಬಂಧ ತನಿಖೆಗಾಗಿ ನಾಲ್ವರು ಹಿರಿಯ ಸದಸ್ಯರನ್ನೊಳಗೊಂಡ ತಂಡವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಚಿಸಿದ್ದಾರೆ.

ಬಿಹಾರ, ಪಶ್ಚಿಮ ಬಂಗಾಳದಲ್ಲಿ ಕೋಮು ಗಲಭೆ: ತನಿಖೆಗೆ ನಾಲ್ವರು ಸದಸ್ಯರ ತಂಡ ರಚಿಸಿದ ಅಮಿತ್ ಶಾ
ಅಮಿತ್ ಶಾ
Published On :

ನವದೆಹಲಿ : ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಉಂಟಾಗಿದ್ದ ಗಲಭೆ ಸಂಬಂಧ ತನಿಖೆಗಾಗಿ ನಾಲ್ವರು ಹಿರಿಯ ಸದಸ್ಯರನ್ನೊಳಗೊಂಡ ತಂಡವನ್ನು ಬಿಜೆಪಿ  ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ರಚಿಸಿದ್ದಾರೆ.

ಈ ತಂಡ ಪಶ್ಚಿಮ ಬಂಗಾಳ ರಾಜ್ಯಕ್ಕೆ ಭೇಟಿ ನೀಡಲಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿಯನ್ನು ಅಮಿತ್ ಶಾ ಅವರಿಗೆ ನೀಡಲಿದೆ.

ಪಶ್ಚಿಮ ಬಂಗಾಳದಲ್ಲಿನ ಅಸಾನ್ ಸೋಲ್ ಬಳಿಯ ಗಲಭೆಯನ್ನು ಖಂಡಿಸಿದ ಅಮಿತ್ ಶಾ, ಇಂತಹ ಘಟನೆಗಳು ದುರದೃಷ್ಟಕರವಾಗಿದ್ದು, ನೋವುಂಟು ಮಾಡಿವೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಮಥೂರ್, ವಕ್ತಾರ ಶಹನವಾಜ್ ಹುಸೇನ್ ಹಾಗೂ ಸಂಸದರಾದ ರೂಪ ಗಂಗೂಲಿ , ವಿ. ಡಿ. ರಾಮ್ ಈ ತಂಡದ ಸದಸ್ಯರಾಗಿದ್ದಾರೆ.

ಈ ಘಟನೆ ಸಂಬಂಧ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಬಿಜೆಪಿ ಸಂಘರ್ಘ ಉಂಟುಮಾಡುತ್ತಿದೆ ಎಂದು ಆರೋಪಿಸಿದ್ದರು.

ರಾಣಿಗಂಜ್ ನಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಭೆ ಉಂಟಾಗಿ, ಒಬ್ಬ ವ್ಯಕ್ತಿ ಮೃತಪಟ್ಟಿದ್ದರು. ಮತ್ತೊಂದೆಡೆ ಬಿಹಾರದಲ್ಲಿಯೂ ಕೋಮು ಗಲಭೆ ಉಂಟಾಗಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.