ಜಮ್ಮು-ಕಾಶ್ಮೀರ; ಕರ್ತವ್ಯನಿರತ ಪೊಲೀಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಪೊಂದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಪೊಂದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ.
ಅನಂತ್ ನಾಡ್ ಜಿಲ್ಲೆಯ ಖನಬಾಲ್ ಪ್ರದೇಶದಲ್ಲಿ ಸಂಚಾರ ನಿಯಂತ್ರ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಉಗ್ರರು ಗುಂಡಿನ ದಾಳಿನಡೆಸಿ ಸ್ಥಳದಿಂದ ಕಾಲ್ಕಿತ್ತುತ್ತಿದ್ದಂತೆಯೇ ಗಾಯಗೊಂಡ ಪೊಲೀಸ್'ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಸಿರುವ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಪೊಲೀಸ್ಜಮ್ಮು ಮತ್ತು ಕಾಶ್ಮೀರಗುಂಡಿನ ದಾಳಿJammu and KashmirterroristpolicemanShotAnantnag districtಅನಂತ್ ನಾಗ್ ಜಿಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


