ಭಾಗಲ್ಪುರ ಗಲಭೆ ಪ್ರಕರಣ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೇ ಪುತ್ರನ ಬಂಧನ!
ಭಾಗಲ್ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್ ರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Published On :
ಪಾಟ್ನಾ: ಭಾಗಲ್ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್ ರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೇ ಪುತ್ರ ಅರಿಜಿತ್ ಶಾಶ್ವತ್ ರನ್ನು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಬಂಧಿಸಲಾಗಿದೆ.
ಮಾರ್ಚ್ 17ರಂದು ಹಿಂದೂ ಹೊಸ ವರ್ಷದ ಸಲುವಾಗಿ ಶಾಶ್ವತ್ ನೇತೃತ್ವದಲ್ಲಿ ನಡೆದ ಮೆರವಣಿಗೆ, ಅಲ್ಪಸಂಖ್ಯಾತರು ಹೆಚ್ಚಾಗಿ ಇರುವ ನಾಥನಗರ್ ಮಾರ್ಗವಾಗಿ ಹಾದುಹೋಗಿತ್ತು. ಇದಾದ ಬಳಿಕ ಸಂಘರ್ಷ ಉಂಟಾಗಿತ್ತು. ಈ ಪ್ರಕರಣ ಸಂಬಂಧ ಅರಿಜಿತ್ ಶಾಶ್ವಥ್ ಬಂಧನ ವಾರಂಟ್ ಜಾರಿಯಾಗಿತ್ತು. ಈ ಸಂಬಂಧ ಅರಿಜಿತ್ ಶಾಶ್ವಥ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಮಾರ್ಚ್ 24ರಂದು ನಡೆದ ವಿಚಾರಣೆಯಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಪಾಟ್ನಾ ಪೊಲೀಸರು ಅರಿಜಿತ್ ಶಾಶ್ವಥ್ ರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಟ್ನಾ ಪೊಲೀಸರು, ಅರಿಜಿತ್ ಶಾಶ್ವಥ್ ಅವರು ಪಾಟ್ನಾ ಜಂಕ್ಷನ್ ನಲ್ಲಿರುವ ಹನುಮಾನ್ ದೇಗುಲದಲ್ಲಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ಒಂದು ಪೊಲೀಸ್ ತಂಡವನ್ನು ರವಾನೆ ಮಾಡಿ ಇದೀಗ ಶಾಶ್ವಥ್ ರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮನು ಮಹಾರಾಜ್ ತಿಳಿಸಿದ್ದಾರೆ.
ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಂಧಿತ ಅರಿಜಿತ್ ಶಾಶ್ವಥ್, ನಾನು ಯಾವುದೇ ತಪ್ಪು ಮಾಡಿಲ್ಲ. ಭಾಗಲ್ಪುರದಲ್ಲಿ ಈಚೆಗೆ ನಡೆದ ಕೋಮುಗಲಭೆ ಸಂಬಂಧ, ರಾಜಕೀಯ ಒತ್ತಡಕ್ಕೆ ಒಳಗಾಗಿ ಪೊಲೀಸರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೊಂದು ಸಮುದಾಯದ ಆರೋಪಿಗಳ ವಿರುದ್ಧ ಪೊಲೀಸರು ಈವರೆಗೂ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
patnaಪಾಟ್ನಾBihar Policeಬಿಹಾರ ಪೊಲೀಸ್Bhagalpur Riot CaseArijit Shashwatಭಾಗಲ್ಪುರ ಗಲಭೆ ಪ್ರಕರಣಅರಿಜಿತ್ ಶಾಶ್ವಥ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


