ದೇಶ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಬಹಿರಂಗ: ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಯ ಅಮಾನತು

ಸಿಬಿಎಸ್ಇಯ 10, 12 ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ್ದ ಸಿಬಿಎಸ್ಇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಬಹಿರಂಗ: ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಯ ಅಮಾನತು
ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಬಹಿರಂಗ: ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಯ ಅಮಾನತು
Published On :
ನವದೆಹಲಿ: ಸಿಬಿಎಸ್ಇಯ 10, 12 ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ್ದ ಸಿಬಿಎಸ್ಇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.  
ಮಾನವ ಸಂಪನ್ಮೂಲ ಇಲಾಖೆ ಅಮಾನತು ಆದೇಶ ಹೊರಡಿಸಿದ್ದು, ಕೆಎಸ್ ರಾಣಾ ಎಂಬ ಅಧಿಕಾರಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದ್ದು ತನಿಖೆಗೆ ಆದೇಶಿಸಲಾಗಿದೆ. 
ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಪ್ರಾಧ್ಯಾಪಕರು ಹಾಗೂ ಓರ್ವ ಕೋಚಿಂಗ್ ಇನ್ಸ್ಟಿಟ್ಯೂಟ್ ಮುಖ್ಯಸ್ಥರನ್ನು ಬಂಧಿಸಲಾಗಿದ್ದು, ಸೋರಿಕೆಯಾಗದಂತೆ ಎಚ್ಚರ ವಹಿಸಬೇಕಿದ್ದ ಅಧಿಕಾರಿ ರಾಣಾ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.