ಶೋಪಿಯಾನ್ ಎನ್ ಕೌಂಟರ್, 7 ಉಗ್ರರ ಸಾವು, ಇಬ್ಬರು ಯೋಧರು ಹುತಾತ್ಮ: ಎಸ್ ಪಿ ವೈದ್ ಸುದ್ದಿಗೋಷ್ಠಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಒಟ್ಟು 8 ಮಂದಿ ಉಗ್ರರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ವೈದ್ ತಿಳಿಸಿದ್ದಾರೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಒಟ್ಟು 8 ಮಂದಿ ಉಗ್ರರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ವೈದ್ ತಿಳಿಸಿದ್ದಾರೆ.
ಶ್ರೀನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶೋಪಿಯಾನ್ ಎನ್ ಕೌಂಟರ್ ನಲ್ಲಿ ಒಟ್ಟು 7 ಮಂದಿ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಅಂತೆಯೇ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಅಂತೆಯೇ ಇಂದು ಸಾವನ್ನಪ್ಪಿದ 7 ಉಗ್ರರ ಪೈಕಿ ಇಬ್ಬರು ಉಗ್ರರು ಈ ಹಿಂದೆ ಕೊಲೆಯಾಗಿದ್ದ ಲೆಫ್ಟಿನೆಂಟ್ ಉಮ್ಮರ್ ಫಯಾಜ್ ಅವರ ಕೊಲೆಯಲ್ಲಿ ಪಾಲ್ಗೊಂಡವರಾಗಿದ್ದರು ಎಂದು ಹೇಳಿದರು.
ಅಂತೆಯೇ ಘಟನೆಯಲ್ಲಿ ಇಬ್ಬರು ನಾಗರಿಕರು ಕೂಡ ಸಾವನ್ನಪ್ಪಿದ್ದು, ಇಬ್ಬರೂ ದ್ರಗಾದ್ ಮತ್ತು ಕಚ್ದೂರಾ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಘಟನೆಯಲ್ಲಿ ಒಟ್ಟು 25 ಮಂದಿ ನಾಗರಿಕರಿಗೆ ಪೆಲ್ಲೆಟ್ ಗನ್ ಗುಂಡೇಟು ತಗುಲಿದ್ದು, 6 ಮಂದಿಗೆ ಸಾಮಾನ್ಯ ಗುಂಡೇಟು ತಗುಲಿದೆ ಎಂದು ವೈದ್ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರTerror AttackJammu and Kashmirಭಾರತೀಯ ಸೇನೆಉಗ್ರದಾಳಿShopian encounterಶೋಪಿಯಾನ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


