ದೇಶ

ಕರ್ನಾಟಕ ಎಲೆಕ್ಷನ್ ಎಫೆಕ್ಟ್: ಬಾಂಗ್ಲಾದಿಂದ ರಾಜ್ಯಕ್ಕೆ ನಕಲಿ ನೋಟು ಸಾಗಿಸುತ್ತಿದ್ದ ಕಳ್ಳರ ಬಂಧನ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ನೋಟುಗಳನ್ನು...

ಕರ್ನಾಟಕ ಎಲೆಕ್ಷನ್ ಎಫೆಕ್ಟ್: ಬಾಂಗ್ಲಾದಿಂದ ರಾಜ್ಯಕ್ಕೆ ನಕಲಿ ನೋಟು ಸಾಗಿಸುತ್ತಿದ್ದ ಕಳ್ಳರ ಬಂಧನ
ನಕಲಿ ನೋಟು
Published On :
ವಿಶಾಖಪಟ್ಟಣಂ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ನೋಟುಗಳನ್ನು ಆಂಧ್ರಪ್ರದೇಶದ ವಿಶಾಕಪಟ್ಟಣಂನಲ್ಲಿ ಜಪ್ತಿ ಮಾಡಲಾಗಿದೆ. 
ಹೈದರಾಬಾದ್-ಹೌರಾ ಈಸ್ಟ್ ಕೋಸ್ಟ್ ಎಕ್ಸ್ ಪ್ರೆಸ್ ನಲ್ಲಿ ನಕಲಿ ನೋಟುಗಳ ಸಾಗಣೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ವಿಶಾಖಪಟ್ಟಂ ವಿಭಾಗೀಯ ಅಧಿಕಾರಿಗಳು ದಾಳಿ ಮಾಡಿ 10.2 ಲಕ್ಷ ರುಪಾಯಿ ಮೌಲ್ಯದ ನೋಟುಗಳು ವಶಕ್ಕೆ ಪಡೆದಿದ್ದದಾರೆ. ಈ ಸಂಬಂಧ ಬೆಂಗಳೂರು ಮೂಲದ ಓರ್ವ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. 
ಐದು ಬಂಡಲ್ ಗಳಲ್ಲಿ 2000 ಮುಖ ಬೆಲೆಯ 510 ನಕಲಿ ನೋಟುಗಳನ್ನು ಸಾಗಿಸುತ್ತಿದ್ದರು. ವ್ಯಕ್ತಿಯೊಬ್ಬ ಬಾಂಗ್ಲಾದೇಶದಿಂದ ತಂದು ಪಶ್ಚಿಮ ಬಂಗಾಳದ ಮಲ್ಡಾದಲ್ಲಿ ಈ ನಕಲಿ ನೋಟುಗಳನ್ನು ಹಸ್ತಾಂತರಿಸಿದ್ದ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ನಕಲಿ ನೋಟುಗಳನ್ನು ಬದಲಾವಣೆ ಮಾಡುವ ಉದ್ದೇಶವಿತ್ತು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಆರೋಪಿಗಳು ಬೆಂಗಳೂರು ಮೂಲದವರಾಗಿದ್ದು ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಹೊಂದಿದ್ದು ಈ ಹಿಂದೆ ಕಿಡ್ನಾಪ್ ಪ್ರಕರಣದಲ್ಲಿ ಬಂಧಿತನಾಗಿದ್ದ ಸದ್ಯ ಆರೋಪಿ ಬೇಲ್ ಮೇಲೆ ಜೈಲಿನಿಂದ ಹೊರಗಡೆ ಬಂದಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.